ಬೆಂಗಳೂರು ಸಹಿತ ರಾಜ್ಯಾಧ್ಯಂತ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯೂ ನೈರುತ್ಯ ಮುಂಗಾರು ಚುರುಕುಗೊಂಡಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಐದು ದಿನ ಮಳೆಯಾಗಲಿದೆ ಎಂದು ತಿಳಿಸಿದೆ.
ಅದರಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಮೈಸೂರು, ಮಂಡ್ಯ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿಯಲಿದೆ ಎಂದು ತಿಳಿಸಿದೆ. ಇನ್ನೂ ಕರಾವಳಿ, ಉತ್ತರ ಒನಾಡು, ದಕ್ಷಿಣ ಒಳನಾಡಿನಲ್ಲಿಯೂ ಮಳೆಯ ಮುನ್ಸೂಚನೆಯ ಅಲರ್ಟ್ ಘೋಷಿಸಿದೆ. ಅಲ್ಲದೇ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಮುನ್ಸೂಚನೆ ನೀಡಿದೆ.