No menu items!
8 C
Munich
Wednesday, April 15, 2026

ಪುಣ್ಯಕೋಟಿ ಯೋಜನೆಯ ರಾಯಭಾರಿಯಾದ ಕರುನಾಡ ಚಕ್ರವರ್ತಿ

Must read

ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ ಈ ಶುಭಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article