ನಾಳೆ ಈ ಏರಿಯಾಗಳಲ್ಲಿ ನೀರು ಬರಲ್ಲ

Date:

ಬೆಂಗಳೂರು ನಗರದ 179 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇಂದು ಮತ್ತು ನಾಳೆ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮೂರನೇ ಘಟಕದಿಂದ ಸುಮಾರು 330 ಎಂಎಲ್‌ಡಿ ಹಾಗೂ ನಾಲ್ಕನೇ ಘಟಕ ಎರಡನೇ ಹಂತದಿಂದ ಸುಮಾರು 550 ಎಂಎಲ್‌ಡಿ ಯಷ್ಟು ನೀರು ಸರಬರಾಜು ಮಾಡುವ ಯಂತ್ರಗಾರಗಳು ನೀರಿನಲ್ಲಿ ಮುಳುಗಡೆಯಾಗಿದೆ. ಹೀಗಾಗಿ ನಗರದ ಕೆಲ ಪ್ರದೇಶದಲ್ಲಿ ಇಂದು & ನಾಳೆ ನೀರನ್ನು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬೆಂಗಳೂರು ಜಲಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಯಶವಂತಪುರ, ಮಲ್ಲೇಶ್ವರಂ, ಶೇಷಾದ್ರಿಪುರಂ, ಓಕಳಿಪುರ, ಶ್ರೀರಾಂಪುರ, ಮತ್ತಿಕೆರೆ ಮತ್ತ ಸುತ್ತಮುತ್ತಲಿನ ಪ್ರದೇಶಗಳು, ಸದಾಶಿವನಗರ, ಪ್ಯಾಲೆಸ್ ಗುಟ್ಟಳ್ಳಿ, ಆರ್.ಎಂ.ವಿ. 2ನೇ ಹಂತ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಆರ್.ಟಿ.ನಗರ, ಜಿ.ಕೆ.ವಿ.ಕೆ, ಸಂಜಯನಗರ, ನ್ಯೂ ಬಿಇಎಲ್ ರಸ್ತೆ, ಹೆಬ್ಬಾಳ, ದಿಣ್ಣೂರು, ಗಂಗಾನಗರ & ಸುತ್ತಮುತ್ತಲಿನ ಪ್ರದೇಶಗಳು, ಚಿಕ್ಕಪೇಟೆ, ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಧರ್ಮರಾಯ ಸ್ವಾಮಿ ದೇವಸ್ಥಾನ, ಆವಿನ್ಯೂ ರಸ್ತೆ, ಮೆಜೆಸ್ಟಿಕ್, ಗಾಂಧಿನಗರ, ಕಸ್ತೂರಬಾ ರಸ್ತೆ, ಶಿವಾಜಿ ನಗರ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು BWSSB ಮಾಹಿತಿ ನೀಡಿದೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...