ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ನಿಧನರಾಗಿದ್ದು , ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ .

” ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ” ಎಂದಿದ್ದಾರೆ.






