ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ಮೃತಪಟ್ಟಿರುವುದು ಆಘಾತ ತಂದಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಉಮೇಶ್ ಕತ್ತಿ ನನ್ನ ಸಂಪುಟದಲ್ಲಿಯೂ ಸಚಿವರಾಗಿದ್ದವರು. ಬೆಳಗಾವಿ, ಉತ್ತರ ಕರ್ನಾಟಕ ಭಾಗದ ಪ್ರಭಾವಿ ವ್ಯಕ್ತಿ. ಅವರ ಅಗಲಿಕೆಯಿಂದ ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ದೊಡ್ಡ ಹೊಡೆತ ಬಿದ್ದಿದೆ ಎಂದರು. ಉಮೇಶ್ ಕತ್ತಿ ಅವರ ಹಠಾತ್ ನಿಧನ ತೀವ್ರ ದುಃ ಖ ತಂದಿದೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ನಮ್ಮನ್ನು ಅಗಲಿರುವುದು ರಾಜ್ಯಕ್ಕೆ ಬಹುದೊಡ್ಡ ನಷ್ಟ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಕುಟುಂಬದವರಿಗೆ ದಃಖ ಭರಿಸುವ ಶಕ್ತಿ ಕೊಡಲಿ ಎಂದು ಸಂತಾಪ ಸೂಚಿಸಿದರು.
ಸಚಿವ ಉಮೇಶ್ ಕತ್ತಿ ಮೃತಪಟ್ಟಿರುವುದು ಆಘಾತ ತಂದಿದೆ
Date: