ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ದ ಕಿಡಿಕಾರಿದೆ . ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನವರು ಭಾರತ ಜೊಡೋ ಮಾಡಲಿ, ರಥಯಾತ್ರೆಯೇ ನಡೆಸಲಿ. ಅಥವಾ ಎಷ್ಟೇ ಕಾರ್ಯತಂತ್ರ ರೂಪಿಸಿದರೂ ಅಧಿಕಾರಕ್ಕೆ ಬರಲು ಮಾತ್ರ ಸಾಧ್ಯವಿಲ್ಲ’ ಎಂದರು.
‘ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ನಡೆಸಲು ಸೆ. 22ರಂದು ನಾನು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದೇನೆ’ ಎಂದು ತಿಳಿಸಿದರು.