ಬಿಎಂಟಿಸಿ ಬಸ್ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ 2,625 ಪ್ರಯಾಣಿಕರನ್ನು ಪತ್ತೆ ಹಚ್ಚಿ ದಂಡ ವಸೂಲಿ ಮಾಡಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಹಿತಿ ನೀಡಿದೆ. ಆಗಸ್ಟ್ ತಿಂಗಳಲ್ಲಿ ಒಟ್ಟು 18,972 ಟ್ರಿಪ್ಗಳನ್ನು ತಪಾಸಣೆ ಮಾಡಲಾಗಿದೆ. ಅದರಲ್ಲಿ 2,625 ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 4,50,270 ರೂಪಾಯಿ ದಂಡ ವಸೂಲಿಯಾಗಿದೆ. ಈ ಸಂಬಂಧ 1,430 ಪ್ರಕರಣಗಳನ್ನು ದಾಖಲಿಸಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್ ಪಡೆಯದೇ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ವಿಚಕ್ಷಣಾ ತಂಡಗಳು ಪತ್ತೆ ಹಚ್ಚಿವೆ. ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆ ತಡೆಗಟ್ಟಲು ನಗರದಾದ್ಯಂತ ಸಂಚರಿಸುವ ವಾಹನಗಳ ತಪಾಸಣೆ ನಡೆದಿದೆ. ಮಹಿಳೆಯರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 119 ಪುರುಷ ಪ್ರಯಾಣಿಕರಿಂದ ಒಟ್ಟು 11,900 ರೂ. ದಂಡ ವಸೂಲಿ ಮಾಡಲಾಗಿದೆ. ಒಟ್ಟಾರೆ, ಆಗಸ್ಟ್ ತಿಂಗಳಲ್ಲಿ 2,744 ಪ್ರಯಾಣಿಕರಿಂದ ಒಟ್ಟು 4,62,170 ರೂ. ದಂಡ ವಸೂಲಿ ಆಗಿದೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ.
Latest article
ಪ್ರಜ್ವಲ್ ಕೃತ್ಯಗಳ ಬಗ್ಗೆ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿದ್ದರೂ ಟಿಕೆಟ್ ನೀಡಿದ್ದಾರೆ !
ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಜಿ ಪರಮೇಶ್ವರ್ ರಾಜೀನಾಮೆ ಕೊಡಬೇಕೆಂದು ಅವರು ಹೇಳುತ್ತಿದ್ದಾರೆ, ಅಸಲಿಗೆ ರಾಜೀನಾಮೆ ಕೊಡಬೇಕಿರುವುದು ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ ಮತ್ತು ಸೂರಜ್ ರೇವಣ್ಣ; ನಮ್ಮ ಮನೆ ಮಗನಿಂದ...
ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ !
ಬೆಂಗಳೂರು: ರೈತರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ'' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮೂಲಕ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಸಿಎಂ, ಡಿಸಿಎಂ ಕಾರಣ !
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿಯಿದೆ. ಇದು ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿಯಿದೆ. ಇದು ಸರ್ಕಾರದ...