ಭಾರತ್ ಜೋಡೋ ಯಾತ್ರೆ ಸಿದ್ಧತೆ ಕುರಿತು ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ವಿವಿಧ ಘಟಕಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ಭಾರತ ಐಕ್ಯತಾ ಯಾತ್ರೆ ಸಿದ್ಧತೆ ಕುರಿತು ಸಭೆ ನಡೆಸಿ ಚರ್ಚಿಸಿದ್ದೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಪಾದಯಾತ್ರಿಗಳನ್ನು ನಿಗದಿತ ದಿನ ಕರೆ ತರಲು ನಮ್ಮ ನಾಯಕರಿಗೆ ಸೂಚಿಸಲಾಗಿದೆ ಎಂದರು. ಇನ್ನೂ ಮುಖ್ಯಮಂತ್ರಿಗಳ ವಿರುದ್ಧ ಕಾಂಗ್ರೆಸ್ ಅಭಿಯಾನ ಕುರಿತು ಕೇಳಿದ ಪ್ರಶ್ನೆಗೆ, ಬಿಜೆಪಿ ನಾಯಕರು ಸಿದ್ದರಾಮಯ್ಯ ಅವರನ್ನು ನಿದ್ರಾಮಯ್ಯ ಎಂದು ಲೇವಡಿ ಮಾಡುತ್ತಿದ್ದರು. ನನ್ನನ್ನು ಕೊತ್ವಾಲ್ ರಾಮಚಂದ್ರನ ಶಿಷ್ಯ ಎಂದು ಕರೆಯುತ್ತಾರೆ. ರಾಜಕಾರಣದಲ್ಲಿ ಅಧಿಕಾರದಲ್ಲಿರುವವರು ಇವೆಲ್ಲವನ್ನೂ ಅರಗಿಸಿಕೊಳ್ಳಬೇಕು. ಈ ಸರ್ಕಾರ 40% ಕಮಿಷನ್ ಸರ್ಕಾರ ಎಂದು ನಾವು ಆರೋಪ ಮಾಡಿದ್ದೇವಾ?.. ಅಧಿಕಾರದಲ್ಲಿರುವವರು ಹಾಗೂ ಜವಾಬ್ದಾರಿ ಹೊತ್ತಿರುವವರ ಕಡೆ ಬೆಟ್ಟು ಮಾಡುವುದು ಸಹಜ. ವ್ಯಂಗ್ಯಚಿತ್ರಗಳಲ್ಲಿ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳನ್ನು ಕ್ರಿಯಾತ್ಮಕ ರೀತಿಯಲ್ಲಿ ಲೇವಡಿ ಮಾಡುತ್ತಾರೆ. ಭ್ರಷ್ಟಾಚಾರ ವಿಚಾರವಾಗಿ ಬೊಮ್ಮಾಯಿ ಅವರ ಸರ್ಕಾರದ ವಿರುದ್ಧ ವಿವಿಧ ರೀತಿಯಲ್ಲಿ ಪ್ರಶ್ನಿಸಲಾಗಿದೆ. ವಿವಿಧ ರೀತಿಯಲ್ಲಿ ಜನರಿಗೂ ಈ ವಿಚಾರ ಮುಟ್ಟಿಸಬೇಕಾಗುತ್ತದೆ. ಹೀಗಾಗಿ ಈ ರೀತಿ ಮಾಡಲಾಗಿದೆ. ಇದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.
ಭಾರತ್ ಜೋಡೋ ಯಾತ್ರೆ ಸಿದ್ಧತೆ ಕುರಿತು ಸಭೆ
Date: