ಮಾಜಿ ಸಿಎಂಗಳಿಗೆ ಸರ್ಕಾರಿ ಬಂಗಲೆ ಯಾಕೆ..? ಸುಪ್ರೀಂ ಕೋರ್ಟ್ ಪ್ರಶ್ನೆ.

Date:

ಮಾಜಿ ಮುಖ್ಯ ಮಂತ್ರಿಗಳು ಸರ್ಕಾರಿ ಬಂಗಲೆಗಳಲ್ಲಿ ನೆಲೆಸುವ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ತರ ತೀರ್ಪು ನೀಡಿದೆ. ಮಾಜಿ ಸಿಎಂ ಗಳಿಗೆ ಜೀವನ ಪರ್ಯಂತ ಸರ್ಕಾರಿ ಬಂಗಲೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅರ್ಹರಲ್ಲ ಎಂಬ ತೀರ್ಪು ನೀಡಿದೆ. ನ್ಯಾಯಮೂರ್ತಿ ಅನಿಲ್ ಆರ್ ದವೆ ನೇತೃತ್ವದ ತ್ರೀಸದಸ್ವ ಪೀಠವು 2004ರ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದೆ. ಈಗಿರುವ ಮಾಜಿ ಸಿಎಂಗಳು ಸರ್ಕಾರಿ ವಸತಿ ಸೌಲಭ್ಯಗಳನ್ನು ಉಪಯಾಗಿಸುತ್ತಿದ್ದಲ್ಲಿ ಇನ್ನು ಎರಡು ಅಥವಾ ಮೂರು ತಿಂಗಳು ಒಳಗೆ ಅದನ್ನು ಖಾಲಿ ಮಾಡಬೇಕೆಂದು ಎಚ್ಚರಿಸಿದೆ. ಸರ್ಕಾರಿ ಸೌಲತ್ತು ಹಾಗೂ ವಸತಿಗಳನ್ನು ಹೊಂದುವ ಹಕ್ಕು ಅವರಿಗಿಲ್ಲ ಎಂದು ತಿಳಿಸಿದೆ.
ಉತ್ತರ ಪ್ರದೇಶದ ಸರ್ಕಾರೇತರ ಸಂಘಟನೆ(ಎನ್‍ಜಿಒ) ಲೋಕ ಪ್ರಹರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಅನಿಲ್ ಆರ್ ದವೆ, ನ್ಯಾ. ಲಲಿತ್ ಮತ್ತು ನ್ಯಾ. ನಾಗೇಶ್ವರ್ ರಾವ್ ಅವರಿದ್ದ ನ್ಯಾಯ ಪೀಠ ಈ ಆದೇಶ ನೀಡಿದೆ.
ಮಾಜೀ ಮುಖ್ಯಮಂತ್ರಿಗಳ ವಸತಿ ಮಂಜೂರಾತಿ ನಿಯಮಗಳು 1997, ಎಂಬ ಕಾನೂನನ್ನು ರಚಿಸಿ ಮಾಜೀ ಮುಖ್ಯ ಮಂತ್ರಿಗಳಿಗೆ ಸರ್ಕಾರಿ ವಸತಿಗಳನ್ನು ಮಂಜೂರು ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ ಎಂದು ಲೋಕ ಪ್ರಹರಿ ಆರೋಪಿಸಿತ್ತು. 2014 ರ ನವೆಂಬರ್ 27ರಂದು ವಿಚಾರಣೆ ಬಳಿಕ ತೀರ್ಪನ್ನು ಕಾಯ್ದಿರಿಸಲಾಗಿತ್ತು. ಆದರೆ ಇಂದು ಅದರ ತೀರ್ಪು ಹೊರ ಬಂದಿದೆ. ಇದರ ಪರಿಣಾಮವಾಗಿ ಮುಲಾಯಂ ಸಿಂಗ್ ಯಾದವ್, ಮಾಯಾವತಿ, ಸೇರಿದಂತೆ ಉತ್ತರ ಪ್ರದೇಶದ ಆರು ಮಾಜೀ ಮುಖ್ಯ ಮಂತ್ರಿಗಳು ವಸತಿ ತೊರೆಯಬೇಕಾಗುತ್ತದೆ.

POPULAR  STORIES :

ಅಬ್ಬಾ.. ಈ ವಿಡಿಯೋ ನೋಡಿದ್ರೆ ಕರಳು ಚುರುಕ್ ಅನ್ನತ್ತೆ..!

ಅರ್ನಬ್ ಗೋಸ್ವಾಮಿ ವಿರುದ್ದ 500 ಕೋಟಿ ರೂ ದಾವೆ ಹೂಡಿದ ಝಾಕೀರ್…!

ಮೊಬೈಲ್ ಫೋನ್ ಚಾರ್ಜ್ ಗೆ ಇಟ್ಟಿರುವಾಗ ಬ್ಲಾಸ್ಟ್ ಆಗಬಹುದು ಹುಷಾರ್…!

ಯಾಹೂ ಸಿಬ್ಬಂದಿಗಳಿಗೆ ಸಿ.ಇ.ಓ.ನ ಕೊನೆಯ ಪತ್ರ

ಸಲ್ಮಾನ್ ಗುಂಡು ಹಾರಿಸಿದ್ದು ನನ್ನ ಕಣ್ಣಾರೆ ನೋಡಿದ್ದೇನೆ: ಕೃಷ್ಣ ಮೃಗ ಬೇಟೆಯಲ್ಲಿ ಹೊಸ ಟ್ವಿಸ್ಟ್.

ಲೈಂಗಿಕ ಸಮಸ್ಯೆಗೆ ರಾಮಬಾಣ ದಾಳಿಂಬೆ ಹಣ್ಣಿನ ಜ್ಯೂಸ್….. !

ಇದ್ದಕ್ಕಿದ್ದ ಹಾಗೆ ಒಂದು ಹುಡುಗಿ ನಿಮ್ಮನ್ನು ತಬ್ಬಿಕೊಳ್ಳಲು ಬಂದಾಗ ನಿಮಗೆ ಏನ್ ಅನ್ಸಲ್ಲಾ ಹೇಳಿ..!

ಧೋನಿಯನ್ನು ಮಾಹೀ ಎಂದು ಕರೆದ ಮಗಳು ಜಿವಾ..! ಅಪ್ಪ ಮಗಳ ಕ್ಯೂಟ್ ವಿಡಿಯೋ..!

ಗಂಡ ಹೆಂಡತಿ ಜಗಳಕ್ಕೆ ಹುಲಿಗೆ ಆಹಾರವಾದ ತಾಯಿ..!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...