ಬಾಲಕಾರ್ಮಿಕರನ್ನು ಬಳಸಿಕೊಂಡರೆ ಎರಡು ವರ್ಷ ಜೈಲು ಖಚಿತ.

Date:

ಇತ್ತೀಚಿನ ದಿನಗಳಲ್ಲಿ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಜಾರಿಯಲ್ಲಿ ಇದ್ದರೂ ಅದಕ್ಕೆ ಕಿಂಚಿತ್ತೂ ಬೆಲೆಕೊಡದೇ ಅಂಗಡಿ, ಹೋಟೇಲ್, ವರ್ಕ್ ಶಾಪ್‍ಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಬಾಲ ಕಾರ್ಮಿಕರು ದುಡಿಯುತ್ತಿರುವುದನ್ನು ನಾವು ನೋಡಿದ್ದೇವೆ. ಕಿತ್ತು ತಿನ್ನುವ ಬಡತನದಿಂದ ಶಾಲೆಯ ಮುಖವನ್ನೂ ನೋಡದೇ ಆಟವಾಡುವ ವಯಸ್ಸಿಗೆ ಕಷ್ಟಾ ಪಟ್ಟು ದುಡಿಯುವ ಬಾಲ ಕಾರ್ಮಿಕರು ಎಲ್ಲಾ ವಲಯಗಳಲ್ಲೂ ಕಾಣ ಸಿಗುತ್ತಾರೆ. ಆದರೆ ಇನ್ನು ಮುಂದೆ ಬಾಲ ಕಾರ್ಮಿಕರ ಹಾವಳಿ ಇರೋದಿಲ್ಲ ನೋಡಿ.. ಬಾಲ ಕಾರ್ಮಿಕ ಪದ್ದತಿ ತಡೆ ಕಾನೂನಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸಹಿ ಮಾಡಿದ್ದಾರೆ. ಇನ್ನು ಯಾರಾದರೂ 14 ವರ್ಷದೊಳಗಿನ ಮಕ್ಕಳನ್ನು ತಮ್ಮ ಅಂಗಡಿ ಮುಂಗಟ್ಟುಗಳಲ್ಲಿ ಕೆಲಸಕ್ಕೆ ಇಟ್ಟುಕೊಂಡಿದ್ದರೆ ನೀವು 2 ವರ್ಷ ಸೆರೆಮನೆವಾಸ ಹಾಗೂ ಗರಿಷ್ಠ 50 ಸಾವಿರ ದಂಡ ಕಟ್ಟಲು ಸಿದ್ದರಾಗಿ.
ಅಷ್ಟೇ ಅಲ್ಲ 14 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರೆ ಅದೂ ಅಪರಾಧ ಎಂದು ನಿರ್ಧರಿಸಲಾಗಿದೆ. ಗಣಿಗಾರಿಕೆ, ಸ್ಪೋಟಕ ಹಾಗೂ ದಹ್ಯ ಪದಾರ್ಥಗಳು ಒಳಗೊಂಡಿರುವ ಯಾವುದೇ ಕೆಲಸಗಳಲ್ಲಿ ಮಕ್ಕಳನ್ನು ತೊಡಗಿಸಿಕೊಂಡಿದ್ದರೆ ಅದೂ ಕೂಡ ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ.
ರಿಯಾಲಿಟಿ ಶೋ, ಸಿನಿಮಾಗಳಲ್ಲಿ ವಿನಾಯಿತಿ.
ಇನ್ನು ಬಾಲ ಕಾರ್ಮಿಕ ತಡೆ ಕಾಯ್ದೆಯಿಂದ ಚಲನಚಿತ್ರಗಳು ರಿಯಾಲಿಟಿನ ಶೋಗಳು, ಜಾಹಿರಾತು, ಟೆಲಿವಿಷನ್ ಉದ್ಯಮಗಳಿಗೆ ಇದರಿಂದ ವಿನಾಯ್ತಿ ನೀಡಲಾಗಿದೆ. ಅಲ್ಲದೇ ಪೋಷಕರ ಜೊತೆಯಲ್ಲಿ ಕೃಷಿಗೆ ನೆರವು ನೀಡಿದರೆ ಅದು ಬಾಲ ಕಾರ್ಮಿಕ ಪದ್ದತಿ ಅಲ್ಲ. ಆದರೆ ಮಕ್ಕಳ ರಜೆ ಸಮಯದಲ್ಲಿ ಅಥವಾ ಶಾಲೆ ಮುಗಿದ ಬಳಿಕ ಅವರನ್ನು ತೊಡಗಿಸಿಕೊಳ್ಳುವುದು ಅಪರಾಧವಲ್ಲ ಎಂದು ನೂತನ ಕಾನೂನಿನಲ್ಲಿ ಅಳವಡಿಸಲಾಗಿದೆ.

POPULAR  STORIES :

ನಿಜವಾದ ಪ್ರೀತಿಗೆ ಸಾವಿಲ್ಲವಂತೆ.. ಇದೊಂದು ಇಂಟ್ರೆಸ್ಟಿಂಗ್ ಪ್ರೇಮ್ ಕಹಾನಿ..!

ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಫೇಸ್‍ಬುಕ್‍ನಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆ..!!

ಮಹಿಳೆಯರೆ… ಸ್ಮೋಕ್ ಮಾಡ್ತಾ ಇದೀರಾ…! ಹುಷಾರ್…!

ಅಬ್ಬಾ.. ಈ ವಿಡಿಯೋ ನೋಡಿದ್ರೆ ಕರಳು ಚುರುಕ್ ಅನ್ನತ್ತೆ..!

ಅರ್ನಬ್ ಗೋಸ್ವಾಮಿ ವಿರುದ್ದ 500 ಕೋಟಿ ರೂ ದಾವೆ ಹೂಡಿದ ಝಾಕೀರ್…!

ಮೊಬೈಲ್ ಫೋನ್ ಚಾರ್ಜ್ ಗೆ ಇಟ್ಟಿರುವಾಗ ಬ್ಲಾಸ್ಟ್ ಆಗಬಹುದು ಹುಷಾರ್…!

ಯಾಹೂ ಸಿಬ್ಬಂದಿಗಳಿಗೆ ಸಿ.ಇ.ಓ.ನ ಕೊನೆಯ ಪತ್ರ

ಸಲ್ಮಾನ್ ಗುಂಡು ಹಾರಿಸಿದ್ದು ನನ್ನ ಕಣ್ಣಾರೆ ನೋಡಿದ್ದೇನೆ: ಕೃಷ್ಣ ಮೃಗ ಬೇಟೆಯಲ್ಲಿ ಹೊಸ ಟ್ವಿಸ್ಟ್.

ಲೈಂಗಿಕ ಸಮಸ್ಯೆಗೆ ರಾಮಬಾಣ ದಾಳಿಂಬೆ ಹಣ್ಣಿನ ಜ್ಯೂಸ್….. !

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...