ವಿದ್ಯುತ್ ತಂತಿಗೆ ಇನ್ನೊಂದು ಬಲಿ..!

Date:

ಮಂಡ್ಯ : ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿರುವ ಘಟನೆ , ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಅಘಲೆಕೊಪ್ಪಲು ಗ್ರಾಮದಲ್ಲಿ ನಡೆದಿದೆ . ಗಿರೀಶ್ (27) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು , ತಮ್ಮ ಜಮೀನಿನಲ್ಲಿ ಹುಲ್ಲು ಕುಹ್ಲಿಗೆ ಹೋದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಳಿದು ದುರ್ಘಟನೆ ಸಂಭವಿಸಿದೆ .

ಇನ್ನೂ ಸ್ಥಳಕ್ಕೆ ಬಿಂಡಿಗನವಿಲೆ ಪೊಲೀಸರು ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿದ್ದಾರೆ . ಗ್ರಾಮಸ್ಥರು ಜಮೀನಿನಿಂದ ಮೃತ ದೇಹವನ್ನ ಹೊರತಂದಿದ್ದಾರೆ . ಸ್ಥಳದಲ್ಲಿ ಮೃತ ಯುವರೈತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು . ಈ ಸಂದರ್ಭದಲ್ಲಿ ಸೆಸ್ಕ್ ವತಿಯಿಂದ ಪರಿಹಾರ ನೀಡುವುದಾಗಿ ಸೆಸ್ಕ್ ಅಧಿಕಾರಿಗಳು ಭರವಸೆ ನೀಡಿದ್ದಾರೆ . ಸಧ್ಯಕ್ಕೆ ನಾಗಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ .

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...