ಹೊಂದಿಸಿ ಬರೆಯಲು ಚಿತ್ರತಂಡ ಸಿದ್ದ..!

Date:

‘ಹೊಂದಿಸಿ ಬರೆಯಿರಿ’ ಸಿನಿಮಾ ದಿನದಿಂದ ದಿನಕ್ಕೆ ಸ್ಯಾಂಡಲ್ ವುಡ್ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ . ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ತಾರಾಗಣ ಸಿನಿಮಾದ ಪ್ರತಿಯೊಂದು ಸ್ಯಾಂಪಲ್ ಗಳು , ಪ್ರಾಮಿಸಿಂಗ್ ಆಗಿದೆ . ಇನ್ನೂ ಬಿಡುಗಡೆಯ ಹೊಸ್ತಿಲಲ್ಲಿರುವ ಸಿನಿಮಾ ತಂಡ ಭರ್ಜರಿ ಪ್ರಚಾರದ ಮೂಲಕವೂ ಗಮನ ಸೆಳೆಯುತ್ತಿದೆ. ‘ಹೊಂದಿಸಿ ಬರೆಯಿರಿ’ ಹಾಡುಗಳ ಮೆರವಣಿಗೆ ಆರಂಭವಾಗಿದ್ದು, ಈಗಾಗಲೇ ಬಿಡುಗಡೆಯಾದ ಎರಡು ಹಾಡುಗಳು ಕೇಳುಗರ ಮನ ಗೆದ್ದಿದೆ . ಇದೀಗ ಚಿತ್ರದ ಬಹು ನಿರೀಕ್ಷಿತ ಮೂರನೇ ಸಾಂಗ್ ಬಿಡುಗಡೆ ಆಗಿದೆ .

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯದಲ್ಲಿ ಅರಳಿರುವ ‘ತಲೆಹರಟೆ ಮಾಡುತ್ತಿದೆ ಈ ಹೃದಯ’ ಎಂಬ ಪೆಪ್ಪಿ ಸಾಂಗ್ ಇದಾಗಿದ್ದು , ಐಶ್ವರ್ಯ ರಂಗರಾಜನ್, ವರುಣ್ ರಾಮಚಂದ್ರ ಈ ಹಾಡಿಗೆ ದನಿಯಾಗಿದ್ದಾರೆ. ಜೋ ಕೋಸ್ಟ ಅವರ ಫ್ರೆಶ್ ಮ್ಯೂಸಿಕ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಹಿಂದೆ ಬಿಡುಗಡೆಯಾಗಿದ್ದ ‘ಬೆಳಕಲಿ’ ಹಾಗೂ ‘ಓ ಕವನ’ ಹಾಡುಗಳು ಸಿನಿರಸಿಕರಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಈ ಹಾಡು ಕೂಡ ಕೇಳುಗರ ಮನಸೆಳೆಯುವ ಲಕ್ಷಣಗಳನ್ನ ಹೊಂದಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ರೆ ನವೆಂಬರ್ 18ರಂದು ಸಿನಿಮಾ ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಕೂಡ ರಿಲೀಸ್ ಡೇಟ್ ಅನೌನ್ಸ್ ಮಾಡಿತ್ತು. ಆದ್ರೆ ಸಿನಿಮಾದ ಅಂತಿಮ ಹಂತದ ತಾಂತ್ರಿಕ ಕೆಲಸಗಳು ಬಾಕಿ ಇರುವುದರಿಂದ ಬಿಡುಗಡೆಯನ್ನು ಚಿತ್ರತಂಡ ಮುಂದೂಡಿದೆ. ನವೆಂಬರ್ 18ರ ಬದಲಾಗಿ ಹೊಸದಾದ ರಿಲೀಸ್ ಡೇಟ್ ಸಿನಿಮಾ ತಂಡ ಅನೌನ್ಸ್ ಮಾಡಲಿದೆ ಎಂದು ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ತಿಳಿಸಿದ್ದಾರೆ.

ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಒನ್ ಲೈನ್ ಕಹಾನಿ ಸುತ್ತ ಹೆಣೆಯಲಾದ ಸುಂದರವಾದ ಕಥಾಹಂದರವೇ ‘ಹೊಂದಿಸಿ ಬರೆಯಿರಿ’. ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಚಿತ್ರಣವಿದೆ ಹಾಗೂ ಭಾವನಾತ್ಮಕ ಜರ್ನಿ ಇದೆ.

ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀಮಹಾದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್, ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

ಜೋ ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಗುಳ್ಟು ಚಿತ್ರ ಖ್ಯಾತಿಯ ಶಾಂತಿ ಸಾಗರ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸಿನಿಮಾ ನಿರ್ಮಾಣ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...