ಮೈಸೂರು ಜಿಲ್ಲಾಡಳಿತದಿಂದ ಕನಕದಾಸರ ಜಯಂತಿ ಅಂಗವಾಗಿ ಮೆರವಣಿಗೆ ಆಯೋಜಿಸಲಾಗಿತ್ತು.
ಅರಮನೆ ಬಳಿಯ ಕೋಟೆ ಆಂಜನೇಯಸ್ವಾಮಿ ದೇಗುಲ ಮುಂಭಾಗದಿಂದ ಅಲಂಕೃತ ವಾಹನದಲ್ಲಿ ಕನಕದಾಸರ ಮೂರ್ತಿ ಮೆರವಣಿಗೆ ನಡೆಯಿತು. ಚಾಮರಾಜೇಂದ್ರ ವೃತ್ತ, KR.ವೃತ್ತ, ಸಯ್ಯಾಜಿರಾವ್ ರಸ್ತೆ, ಬಸವೇಶ್ವರ ವೃತ್ತ, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತದ ಮಾರ್ಗವಾಗಿ ಮೆರವಣಿಗೆ ಸಾಗಿದ್ದು, ಡೊಳ್ಳು ಕುಣಿತ, ತಮಟೆ, ನಗಾರಿ ಸೇರಿ ವಿವಿಧ ಕಲಾತಂಡಗಳು ಭಾಗಿಯಾಗಿದ್ವು. ಇನ್ನ ಕನಕ ಜಯಂತಿ ಮೆರವಣಿಗೆಯನ್ನ ವ್ಯವಸ್ಥಿತವಾಗಿ ಆಯೋಜಿಸದ ಮೈಸೂರು ಜಿಲ್ಲಾಡಳಿತದ ವಿರುದ್ಧ MLC H.ವಿಶ್ವನಾಥ್, ಮಾಜಿ ಶಾಸಕ M.K.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ರು.
ಕನಕದಾಸರ ಜಯಂತಿ ಅಂಗವಾಗಿ ಅದ್ದೂರಿ ಮೆರವಣಿಗೆ
Date: