ರಸ್ತೆ ಗುಂಡಿಗೆ ನಿವೃತ್ತ ಯೋಧ ಬಲಿ…!

Date:

ರಸ್ತೆ ಗುಂಡಿಗೆ ನಿವೃತ್ತ ಯೋಧ ಬಲಿಯಾಗಿರುವ ದುರ್ಘನೆ ಮಂಡ್ಯದ ಕಾರಿಮನೆ ಗೇಟ್ ಬಳಿ ನಡೆದಿದೆ. ನಿವೃತ್ತ ಯೋಧ ಎಸ್.ಎನ್.ಕುಮಾರ್ ಮೃತ ದುರ್ದೈವಿ.

ಕುಮಾರ್ ಹಾಗೂ ಅವರ ತಂದೆ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿಯನ್ನ ತಪ್ಪಿಸಲು ಹೋಗಿದ್ದಾರೆ. ಈ ವೇಳೆ ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾರೆ. ಹಿಂದಿನಿಂದ ಬಂದ ಲಾರಿ ಯೋಧ ಕುಮಾರ್ ಮೇಲೆ ಹರಿದುಕೊಂಡು ಹೋಗಿದೆ.

ಪರಿಣಾಮ ಕುಮಾರ್ ಸಾವನ್ನಪ್ಪಿದ್ದಾರೆ. ಅವರ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಮಾರ್ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ಇತ್ತೀಚೆಗಷ್ಟೇ ನಿವೃತ್ತರಾಗಿದ್ದರು.

ಬಳಿಕ ಪೊಲೀಸ್ ಪೇದೆಯಾಗಿ ತರಬೇತಿ ಪಡೆದಿದ್ದರು. ನಿನ್ನೆ ಸ್ವಗ್ರಾಮ ಸಾತನೂರು ಗ್ರಾಮಕ್ಕೆ ಬಂದಿದ್ದಾಗ ಘಟನೆ ಸಂಭವಿಸಿದೆ. ಮಂಡ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.!

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.! ಬೆಂಗಳೂರು:...

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು:...

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ 8 ಮಂದಿ ಬಂಧನ

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ 8 ಮಂದಿ...