ಕಾಡಾನೆ ಹಾವಳಿ ತಡೆಗೆ ನಾಲ್ಕು ಜಿಲ್ಲೆಗಳಲ್ಲಿ ELEPHANT ಟಾಸ್ಕ್ ಫೋರ್ಸ್ ರಚಿಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗುವಂತೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ. ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುಗುವುದು. ಜನ ವಸತಿ, ಕೃಷಿ ಪ್ರದೇಶ, ಕಾಫಿ ಎಸ್ಟೇಟ್ಗಳಲ್ಲಿ ಆನೆ ಚಲನವಲನ, ಅರಣ್ಯಕ್ಕೆ ಆನೆಗಳನ್ನ ಹಿಮ್ಮೆಟ್ಟಿಸುವ ಕಾರ್ಯಗಳನ್ನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರ್ದೇಶನದಲ್ಲಿ ಮಾಡುವಂತೆ ಸೂಚಿಸಲಾಗಿದೆ. ಇನ್ನ ಪ್ರತಿ ಟಾಸ್ಕ್ ಫೋರ್ಸ್ ಕೇಂದ್ರ ಸ್ಥಾನದಲ್ಲಿ ನಿಯಂತ್ರಣ ಕೊಠಡಿ ನಿರ್ಮಾಣ, ದೂರವಾಣಿ ಸಂಪರ್ಕ, ಆನೆಗಳನ್ನ ಹಿಮ್ಮೆಟ್ಟಿಸಲು ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಸೇರಿ ಇನ್ನಿತರೆ ಸಲಕರಣೆಗಳನ್ನು ನೀಡಲು ನಿರ್ದೇಶಿಸಲಾಗಿದೆ.
ಕಾಡಾನೆ ಹಾವಳಿ ತಡೆಗೆ ಟಾಸ್ಕ್ ಫೋರ್ಸ್ ರಚನೆ
Date: