‘ಟಿಪ್ಪು ನಿಜ ಕನಸುಗಳು’ ವಿವಾದಾತ್ಮಕ ಕೃತಿ ಮಾರಾಟ ತಡೆಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕ ಆದೇಶ ಹೊರಡಿಸಿದೆ. ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ರಚಿಸಿರುವ ಟಿಪ್ಪು ನಿಜ ಕನಸುಗಳು ಪುಸ್ತಕವನ್ನು ಆನ್ಲೈನ್ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ ಆದೇಶ ಹೊರಡಿಸಲಾಗಿದೆ. ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ರಫಿವುಲ್ಲಾ ಸಲ್ಲಿಸಿದ್ದ ದಾವೆಯ ವಿಚಾರಣೆ ನಡೆಸಿದ 15ನೇ ಹೆಚ್ಚುವರಿ ಸಿಟಿ ಮತ್ತು ಸೆಷನ್ಸ್ ನ್ಯಾಯಾಧೀಶರಾದ J.R.ಮೆಂಡೋನ್ಸಾ ನೇತೃತ್ವದ ಪೀಠ ಕೃತಿ ಮಾರಾಟ ತಡೆಗೆ ಆದೇಶ ಹೊರಡಿಸಿದೆ. ಇನ್ನ ‘ಟಿಪ್ಪು ನಿಜ ಕನಸುಗಳು’ ನಾಟಕ ಪ್ರದರ್ಶನಕ್ಕೆ ಕೋರ್ಟ್ ಯಾವುದೇ ತಡೆ ನೀಡಿಲ್ಲ.
ಟಿಪ್ಪು ನಿಜ ಕನಸುಗಳು’ ಕೃತಿ ಮಾರಾಟಕ್ಕೆ ಬ್ರೇಕ್
Date: