ನವೆಂಬರ್ 28ರಂದು ನಂಜನಗೂಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹರ್ಷವರ್ಧನ್ ತಿಳಿಸಿದ್ರು. ಈ ಬಗ್ಗೆ ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು, ನಂಜನಗೂಡಿನ ಶ್ರೀಕಂಠೇಶ್ವರ ದೇಗುಲಕ್ಕೆ ಸರ್ಕಾರದಿಂದ ಮಂಜೂರಾಗಿರುವ ವಿವಿಧ ಕಾಮಗಾರಿಗಳಿಗೆ ಸಿಎಂ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಜೊತೆಗೆ ನುಗು ಮತ್ತು ಹೆಡಿಯಾಲ ಏತ ನೀರಾವರಿ ಯೋಜನೆಗೆ ಚಾಲನೆ, ಗೋಳೂರಿನಲ್ಲಿ 66\11 ಕೆವಿ ವಿದ್ಯುತ್ ಉಪ ಕೇಂದ್ರದ ಶಂಕುಸ್ಥಾಪನೆ ಸೇರಿ ವಿವಿಧ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹರ್ಷವರ್ಧನ್ ತಿಳಿಸಿದ್ದಾರೆ.