ಚಿರತೆ ದಾಳಿಗೆ ಯುವತಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿಯಲ್ಲಿ ನಡೆದಿದೆ. ಮೇಘನಾ ಚಿರತೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದು, ಮನೆ ಮುಂದೆ ಕುಳಿತಿದ್ದ ಯುವತಿ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ.
ಚಿರತೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನ ಚಿಕಿತ್ಸೆಗೆ ಸ್ಪಂದಿಸದೆ ಯುವತಿ ಮೇಘನಾ ಸಾವನ್ನಪ್ಪಿದ್ದು, ಆಸ್ಪತ್ರೆ ಮುಂಭಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ರು. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ. ಮೃತ ಯುವತಿ ಕುಟುಂಬಕ್ಕೆ 7.5 ಲಕ್ಷ ಪರಿಹಾರ ನೀಡೋದಾಗಿ ಘೋಷಣೆ ಮಾಡಲಾಗಿದ್ದು, ಸ್ಥಳದಲ್ಲೇ DCF ಕಮಲಾ ಕರಿಕಾಳನ್ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ್ರು.