ಸಿದ್ದರಾಮಯ್ಯ ಸ್ಪರ್ಧೆ ಈ ಕ್ಷೇತ್ರದಿಂದ ಬಹುತೇಕ ಖಚಿತ

admin
0 Min Read

ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಈ ಬಗ್ಗೆ ಜನವರಿ ತಿಂಗಳ ಮೊದಲ ವಾರದಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.

ನಿನ್ನೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಭರ್ಜರಿ ಸಂಚರಿಸಿದ್ದು, ಪ್ರತಿ ಗ್ರಾಮದಲ್ಲಿಯೂ ಸಿದ್ದರಾಮಯ್ಯಗೆ ಅದ್ಧೂರಿ ಸ್ವಾಗತ ಕೋರಲಾಗಿದೆ.

ಸಿದ್ದರಾಮಯ್ಯ ಪ್ರವಾಸ ಕೈಗೊಂಡ ಸ್ಥಳಗಳಲ್ಲಿ ಯತೀಂದ್ರ ಕೂಡ ಹಾಜರಿದ್ದು, ಪುತ್ರನ ಕಾರ್ಯ ವೈಖರಿ ಬಗ್ಗೆ ಜನರ ಮುಂದೆಯೇ ಸಿದ್ದರಾಮಯ್ಯ ಶಹಬ್ಬಾಸ್ ಗಿರಿ ನೀಡಿದ್ದಾರೆ.

ಇಂದು ಕೂಡ ವರುಣಾ ಕ್ಷೇತ್ರದ ವಿವಿಧ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗುತ್ತಿದ್ದು, ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ರೆಡಿಯಾಗ್ತಿದ್ದಾರೆ.

Share This Article
Leave a Comment