ನಂದಮುರಿ ಬಾಲಕೃಷ್ಣ ಹೈ ವೋಲ್ಟೇಜ್ ಪ್ಯಾನ್ ಇಂಡಿಯಾ ಚಿತ್ರದ ಕಹಾನಿ..!

Date:

ಗಾಡ್ ಆಫ್ ಮಾಸ್ ಎಂದೇ ಕರೆಸಿಕೊಳ್ಳೋ ತೆಲುಗು ನಟ ನಂದಮುರಿ ಬಾಲಕೃಷ್ಣ ಅವರ 108ನೇ ಸಿನಿಮಾ ಇಂದು ಅದ್ದೂರಿಯಾಗಿ ಸೆಟ್ಟೇರಿದೆ. ಬಾಲಕೃಷ್ಣ 108ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಇಬ್ಬರ ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಪ್ಯಾನ್ ಇಂಡಿಯಾ ಚಿತ್ರಕ್ಕೆ , ಶೈನ್ ಸ್ಕ್ರೀನ್ಸ್ ಬ್ಯಾನರ್ ನಡಿ ಸಾಹು ಗರಪಟಿ ಮತ್ತು ಹರೀಶ್ ಪೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.

NBK108ನೇ ಚಿತ್ರಕ್ಕೆ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದ್ದಾರೆ . ನಿರ್ಮಾಪಕ ದಿಲ್ ರಾಜು ಕ್ಯಾಮೆರಾ ಚಾಲನೆ, ಲೆಜೆಂಡರಿ ನಿರ್ದೇಶಕ ಕೆ.ರಾಘವೇಂದ್ರ ರಾವ್ ಮುಹೂರ್ತ ಸೀನ್ ಗೆ ಆಕ್ಷನ್ ಕಟ್ ಹೇಳುವ ಮೂಲಕ ಅದ್ದೂರಿಯಾಗಿ ಚಾಲನೆ ನೀಡಲಾಗಿದೆ ‌.

ಬಾಲಕೃಷ್ಣ ಅವರ ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ . ಸದ್ಯದಲ್ಲೇ ಟೈಟಲ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದ್ದು , ಇಂದಿನಿಂದಲೇ ಚಿತ್ರೀಕರಣ ಆರಂಭವಾಗಲಿದೆ . ಆಕ್ಷನ್ ಸೀನ್ ನೊಂದಿಗೆ ಚಿತ್ರೀಕರಣ ಆರಂಭವಾಗಲಿದೆ. ಆಕ್ಷನ್ ಸೀನ್ ಸೆರೆ ಹಿಡಿಯಲೆಂದೇ ರಾಜೀವನ್ ಅವರ ನೇತೃತ್ವದಲ್ಲಿ ದೊಡ್ಡ ಸೆಟ್ ಗಳನ್ನು ನಿರ್ಮಾಣ ಮಾಡಲಾಗಿದ್ದು, ಖ್ಯಾತ ಸಾಹಸ ನಿರ್ದೇಶಕ ವಿ. ವೆಂಕಟ್ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಆಕ್ಷನ್ ಹಾಗೂ ಮಾಸ್ ಎಲಿಮೆಂಟ್ ಒಳಗೊಂಡ ಈ ಚಿತ್ರಕ್ಕೆ ಬಾಲಕೃಷ್ಣ ಅವರ ಮಾಸ್ ಇಮೇಜ್, ಸ್ಟಾರ್ ಡಂ ಎಲ್ಲವನ್ನು ಗಮನದಲ್ಲಿಟ್ಟುಕೊಂಡೇ ಅನಿಲ್ ರವಿಪುಡಿ ಪವರ್ ಫುಲ್ ಕಥೆ ಹೆಣೆದಿದ್ದಾರೆ. ಚಿತ್ರದಲ್ಲಿ ಕನ್ನಡದ ನಟಿ ಶ್ರೀಲೀಲಾ ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಎಸ್. ತಮನ್ ಸಂಗೀತ ನಿರ್ದೇಶನವಿದೆ. ಬಾಲಕೃಷ್ಣ, ಅನಿಲ್ ರವಿಪುಡಿ, ಎಸ್. ತಮನ್ ಈ ಮೂರು ಕಾಂಬಿನೇಶನ್ ಒಂದಾಗಿರೋ ಈ ಚಿತ್ರದ ಮೇಲೆ ಬಾಲಯ್ಯ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿ.ರಾಮ್ ಪ್ರಸಾದ್ ಕ್ಯಾಮೆರಾ ನಿರ್ದೇಶನ, ತಮ್ಮಿ ರಾಜು ಸಂಕಲನ ಚಿತ್ರಕ್ಕಿದೆ. ಸದ್ಯದಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...