ಗೋ ಹತ್ಯೆ ಮಾಡಿದ್ದಾರೆ ಎಂದು ಅಮಾಯಕ ದಲಿತರ ಮೇಲೆ ಶೋಷಣೆಗಳು ನಡೆಯುತ್ತಿದೆ. ನೀವು ಅವರನ್ನು ಕೊಲ್ಲುವುದಾದರೆ ಮೊದಲು ನನ್ನನ್ನು ಕೊಂದು ಮುಂದೆ ಹೋಗಿ. ರಾಷ್ಟ್ರದಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿ ಶೇ.80 ರಿಂದ 90ರಷ್ಟು ಮಂದಿ ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂಬ ಹೇಳಿಕೆ ನೀಡಿದ್ದ ಪ್ರಧಾನಿ ಮೋದಿ ಇದೀಗ ಅನೇಕ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರಧಾನಿ ಈ ರೀತಿಯ ಹೇಳಿಕೆಯನ್ನು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂದು ತಿಳಿಯುವುದಕ್ಕಾಗಿ ಅವರ ಮೇಲೆ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹಿಂದೂ ಮಹಾಸಭಾ ಮುಖಂಡ ಸ್ವಾಮಿ ಚಕ್ರಪಾಣಿ ತಿಳಿಸಿದ್ದಾರೆ.
ನಕಲೀ ಗೋ ರಕ್ಷಕರು ಗೋವುಗಳನ್ನು ರಕ್ಷಿಸುತ್ತಿಲ್ಲ ಬದಲಾಗಿ ರಾಷ್ಟ್ರದಲ್ಲಿ ಗೋ ರಕ್ಷಣೆಯ ಹೆಸರಿನಲ್ಲಿ ಅಕ್ರಮಗಳನ್ನು ಎಸಗುತ್ತಿದ್ದಾರೆ. ಆ ಮೂಲಕ ಸಮಾಜದಲ್ಲಿ ಅವ್ಯವಸ್ಥೆಯನ್ನುಂಟು ಮಾಡಿ ಸಂಘರ್ಷಕ್ಕೆ ಕಾರಣಕರ್ತರಾಗಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಹೇಳಿಕೆ ನೀಡಿದ್ದರು. ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಖಿಲ ಭಾರತ ಹಿಂದೂ ಮಹಾ ಸಭಾ ಮೋದಿ ಹೇಳಿಕೆ ವಿರುದ್ದ ಲೀಗಲ್ ನೋಟಿಸ್ ಜಾರೀ ಮಾಡಲು ನಿರ್ಧರಿಸಿದೆ.
ಅಲ್ಲದೇ ಗೋ ರಕ್ಷಕರ ಬಗ್ಗೆ ನೀಡಿರುವ ಹೇಳಿಕೆಯ ಹೊಣೆಯನ್ನು ಮೋದಿ ಅವರೇ ಹೊರಬೇಕು ಹಾಗೂ ಅವರು ಕೂಡಲೇ ರಾಜಿನಾಮೆ ನೀಡಬೇಕು. ಇಲ್ಲದಿದ್ದಲ್ಲಿ ಮುಂಬರುವ ಉತ್ತರ ಪ್ರದೇಶದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಆರ್‍ಎಸ್‍ಎಸ್ ಕಠಿಣ ಬೆಲೆ ತೆರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
POPULAR STORIES :
ಹನ್ನೆರಡು ವರ್ಷಗಳಿಂದ ಈ ಶಾಲೆಯಲ್ಲಿ ರಾಷ್ಟ್ರಗೀತೆಯೇ ಮೊಳಗಲಿಲ್ಲ…!
ತಲೆ ಇಲ್ಲ… ಆದ್ರೂ ನಡೆದಾಡುತ್ತೆ ಕೋಳಿ..?!
ಅಲ್ಲಾಹ್… ಅಂದಿದಕ್ಕೆ ವಿಮಾನದಿಂದ ಗೇಟ್ ಪಾಸ್ ಶಿಕ್ಷೆ…!
ವಿದ್ಯಾರ್ಥಿಗಳೊಂದಿಗೆ ಪ್ರಾಕ್ಟಿಕಲ್ ಕ್ಲಾಸ್ ತೆಗೆದ ಬಯಾಲಜಿ ಮೇಡಂ..!
ಈಕೆಯೇ ನೋಡಿ ಸ್ಯಾಂಡಲ್‍ವುಡ್‍ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದ ನಾಯಕಿ…!!