12 ಅಂಶದ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾದ ಹಿನ್ನಲೆಯಲ್ಲಿ ಇದೇ ಸೆಪ್ಟೆಂಬರ್ 2 ರಂದು ಕರೆ ನೀಡಿದ್ದ ಭಾರತ್ ಬಂದ್ ಖಚಿತವಾಗಿದ್ದು, 10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಬಂದ್‍ಗೆ ವ್ಯಾಪಕ ಬೆಂಬಲ ಸೂಚಿಸಿವೆ. ಕೃಷಿಯೇತರ ಕೌಶಲ್ಯ ರಹಿತ ಕಾರ್ಮಿಕರ ಕನಿಷ್ಠ ದಿನಗೂಲಿಯನ್ನು ಏರಿಕೆ ಮಾಡಬೇಕೆಂದು ಕಾರ್ಮಿಕ ಒಕ್ಕೂಟಗಳ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂಧಿಸದ ಕಾರಣದಿಂದಾಗಿ ಇದೇ ಶುಕ್ರವಾರದಂದು ದೇಶದಾದ್ಯಂತ ಬಂದ್‍ಗೆ ಕರೆ ನೀಡಲಾಗಿದೆ. ಕಾರ್ಮಿಕ ಒಟ್ಟೂಟಗಳ ಮನವೊಲಿಕೆಗಾಗಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಸಂಧಾನ ವಿಫಲಗೊಂಡಿದ್ದು, ಯಾವುದೇ ಕಾರಣಕ್ಕೂ ಬಂದ್ ಹಿಂದಕ್ಕೆ ಪಡೆಯೋದಿಲ್ಲವೆಂದು ಕಾರ್ಮಿಕ ಒಕ್ಕೂಟಗಳು ಸ್ಪಷ್ಟಪಡಿಸಿವೆ. ಇನ್ನು ಕಾರ್ಮಿಕ ಸಂಘಟನೆಗಳ ಪಟ್ಟು ಸಡಿಲಿಸದೇ ಹೋದರೆ ಸರ್ಕಾರಿ ಕಛೇರಿಗಳನ್ನೊಳಗೊಂಡಂತೆ, ಬ್ಯಾಂಕುಗಳು, ಕೈಗಾರಿಕೆಗಳು, ಸಾರಿಗೆ ಸಂಚಾರ ವ್ಯವಸ್ಥೆ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಿದೆ.
POPULAR STORIES :
ಜಿಯೋ ಎಫೆಕ್ಟ್: ಏರ್‍ಟೆಲ್ 4ಜಿ ಸೇವೆಗಳ ಮೇಲೆ ಶೇ.80ರಷ್ಟು ರಿಯಾಯಿತಿ.
18 ವರ್ಷ ತುಂಬುದ್ರೆ 37 ಸಾವಿರ ಆಫರ್…!
ಸ್ಮಶಾನದಲ್ಲಿದೆ ನಮ್ಮೂರ ಶಾಲೆ: ಒಬ್ರು ಸತ್ರೆ ಮೂರ್ ದಿನ ಶಾಲೆ ರಜೆ..!
ಲಂಡನ್ ಒಲಂಪಿಕ್‍ನಲ್ಲಿ ಕಂಚು ಗೆದ್ದಿದ್ದ ಯೋಗೆಶ್ವರ್‍ಗೆ ಬೆಳ್ಳಿ ಭಾಗ್ಯ..!!
ನಿಮ್ಮ ಸ್ಕಿನ್ ಸಾಫ್ಟ್ ಆಗಬೇಕೆ..? ಹಾಗಿದ್ರೆ ಅಲೋವೇರಾಕ್ಕೆ ಮೊರೆ ಹೋಗಿ….!
ಪಬ್ಲಿಕ್ ಪ್ಲೇಸ್‍ನಲ್ಲೇ ಸೆಕ್ಸ್ ಮಾಡಿ ಸಿಕ್ಕಿಬಿದ್ದ ಹಾಲಿವುಡ್ ಸೆಲೆಬ್ರೆಟಿ…!