ತಮಿಳುನಾಡಿಗೆ ಹತ್ತು ದಿನಗಳ ಕಾಲ ಕಾವೇರಿ ನೀರು ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಆಕ್ರೋಶಗೊಂಡಿರುವ ಮೈಸೂರು ಮತ್ತು ಮಂಡ್ಯ ಜಿಲ್ಲೆಯ ರೈತರ ಪ್ರತಿಭಟನೆಯ ಕಾವು ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮಂಡ್ಯ, ಮದ್ದೂರು ಪ್ರದೇಶಗಳಲ್ಲಿ ಜನರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಮ್ಮ ಜಿಲ್ಲೆಯ ಜನರಿಗೆ ಕುಡಿಯಲೂ ಸಹ ನೀರಿಲ್ಲದಿರುವಾಗ, ತಮಿಳುನಾಡಿಗೆ ಹೇಗೆ ನೀರು ಬಿಡಲು ಸಾಧ್ಯ ಎಂದಿರುವ ಪ್ರತಿಭಟನಾಕಾರರು, ತಮಿಳುನಾಡು ಸಿಎಂ ಜಯಲಲಿತಾ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇನ್ನು ಮದ್ದೂರು ಸುತ್ತ ಮುತ್ತಲಿನ ರೈತರು ರಸ್ತೆಯ ಮಧ್ಯೆ ಬೆಂಕಿ ಹಚ್ಚಿದ ಪರಿಣಾಮ ಅಲ್ಲಿನ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಮತ್ತೊಂದೆಡೆ ಬೀದಿಗಿಳಿದ ಯುವಕರ ತಂಡ ರಸ್ತೆಯ ಮಧ್ಯೆಯೇ ಗ್ಯಾಸ್ ಪಾತ್ರೆ, ತರಕಾರಿಗಳನ್ನಿಟ್ಟು ಅಡುಗೆ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಪ್ರತಿಭಟನೆ ನಡೆಯುತ್ತಿದ್ದರೂ ಅಂಗಡಿಗಳನ್ನು ತೆರೆದಿದ್ದರಿಂದ ವ್ಯಾಪಾರ ನಿರತರ ಬಳಿ ಧಾವಿಸಿದ ಪ್ರತಿಭಟನಾಕಾರರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಯಿತು.
https://youtu.be/7JnzW29Y0bI
POPULAR STORIES :
ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!
ಇನ್ಮುಂದೆ ಡ್ರೈವ್ ಮಾಡಲು ಡಿಎಲ್,ಆರ್‍ಸಿ, ಡಿಜಿಲಾಕರ್‍ನಲ್ಲಿದ್ದರೆ ಸಾಕು..!
ಸೆಪ್ಟೆಂಬರ್ 9ಕ್ಕೆ ಕರ್ನಾಟಕ ಬಂದ್‍ಗೆ ಕರೆ
ಮುಸ್ಲೀಂ ಮಕ್ಕಳಿಗೆ ಕುರಾನ್ ಹೇಳಿ ಕೊಡ್ತಾಳೆ ಈ ಹಿಂದು ಯುವತಿ..!
ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ.
ದೇಹದಲ್ಲಿರೋ ವಿಟಮಿನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ..??
ಬಂಪರ್ ಆಫರ್…! 500ರೂ. ಕೊಟ್ಟು ಒಂದು ದಿನ ಜೈಲುವಾಸ ಅನುಭವಿಸಿ..!
ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಆಕೆಗೆ ಅಲ್ಲಿನ ಸರ್ಕಾರ ಕೊಟ್ಟ ಉಡುಗೊರೆ ಏನು ಗೊತ್ತಾ…?