ಕಾವೇರಿ ಹೋರಾಟಕ್ಕೆ ಮಂಗಳೂರಲ್ಲಿಲ್ಲ ಬೆಂಬಲ..!

Date:

 ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ನೀತಿಯನ್ನು ಹಾಗೂ ಸುಪ್ರೀಂ ಕೋರ್ಟ್ ಆದೇಶವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಬಂದ್ ಗೆ ಎಲ್ಲೆಡೆಯಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದರೆ. ಉಡುಪಿ ಮತ್ತು ಮಂಗಳೂರಿನಲ್ಲಿ ಮಾತ್ರ ಬಂದ್ ಬಿಸಿ ಶೇ.1 ರಷ್ಟೂ ಇರ್ಲಿಲ್ಲ ನೋಡಿ..! ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಉಡುಪಿ ಹಾಗೂ ಮಂಗಳೂರು ಸೇರಿದಂದೆ ದಕ್ಷಿಣ ಕನ್ನಡ ಬಂದ್ ಗೆ ಯಾವುದೇ ಬೆಂಬಲ ನೀಡುವುದಿಲ್ಲವೆಂದು ಪೂರ್ವ ನಿರ್ಧಾರ ಕೈಗೊಂಡಿತು. ಅದೇ ರೀತಿಯಾಗಿ ಇಂದು ಕರಾವಳಿ ಭಾಗಗಳಲ್ಲಿ ಬಂದ್ ಗೆ ಯಾವುದೇ ಬೆಂಬಲ ನೀಡದೇ ಯಥಾ ಸ್ಥಿತಿ ಕಾಯ್ದುಕೊಂಡಿದೆ. ಈ ಹಿಂದೆ ನಿರ್ಧರಿಸಿರುವಂತೆ ಮಂಗಳೂರು ಭಾಗಗಳಲ್ಲಿ ಬಂದ್ ಗೆ ಯಾವುದೇ ಬೆಂಬಲ ನೀಡಲಿಲ್ಲ ಎಂದು ತಿಳಿದು ಬಂದಿದೆ. ಶಾಲಾ ಕಾಲೇಜುಗಳಿಗೆ ಈ ಭಾಗಗಳಿಗೆ ರಜೆ ನೀಡಿದ್ದಾರೆ ಬಿಟ್ಟರೆ ಪ್ರತಿ ನಿತ್ಯದಂತೆ ಇಂದೂ ಕೂಡ ಜನ ಜೀವನ ನಿರಾಳವಾಗಿ ಸಾಗಿದೆ. ಇನ್ನು ಅಂಗಡಿ ಮುಂಗಟ್ಟುಗಳು, ಆಸ್ಪತ್ರೆ, ಬಸ್ ವ್ಯವಸ್ಥೆ, ಬ್ಯಾಂಕ್ ಗಳು, ಹೋಟೆಲ್, ಹಾಗೂ ಖಾಸಗೀ ಸಂಸ್ಥೆಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ. ಎತ್ತಿನ ಹೊಳೆ ಯೋಜನೆ ವಿರುದ್ದ ಕುಡ್ಲಾ ಬಂದ್ ಮಾಡಿದ್ದ ಸಂದರ್ಭದಲ್ಲಿ ಇತರೆ ಜಿಲ್ಲೆಗಳಿಂದ ನಮಗೆ ಯಾವುದೇ ರೀತಿಯ ಬೆಂಬಲ ವ್ಯಕ್ತವಾಗಿಲ್ಲ. ಹೀಗಿರುವಾಗ ಕರ್ನಾಟಕ ಬಂದ್ ಗೆ ಈ ಜಿಲ್ಲೆಯಲ್ಲಿ ಒಮ್ಮತ ಅಭಿಪ್ರಾಯ ವ್ಯಕ್ತವಾಗಿರಲಿಲ್ಲ. ಅವಿಭಜಿತ ಕನ್ನಡ ಜಿಲ್ಲೆಗಳಲ್ಲಿನ ಕನ್ನಡ ಪರ ಸಂಘಟನೆಗಳು ಬಂದ್ ಗೆ ಸೂಕ್ತ ಬೆಂಬಲ ನೀಡದೇ ದೂರ ಉಳಿದಿವೆ.

POPULAR  STORIES :

ಸರ್ಕಾರಿ ಅಧಿಕಾರಿಯಿಂದ ಐದು ಲಕ್ಷ ಲಂಚದ ಬೇಡಿಕೆ, ಇದೇ ಅಲ್ವಾ ಅಚ್ಚೇ ದಿನ್: ಕಪಿಲ್ ಪ್ರಶ್ನೆ..!

ಬಹು ನಿರೀಕ್ಷಿತ ಬಿಗ್ ಬಾಸ್-4 ಕಮಿಂಗ್ ಸೂನ್…!

ತಮಿಳುನಾಡಿಗೆ 61 ಟಿಎಂಸಿ ನೀರು ಬೇಕು, ಮೇಲುಸ್ತುವಾರಿ ಸಮಿತಿಗೆ ಜಯಾ ಪತ್ರ..!

ತಾಜಾ ತರಕಾರಿಗಳಿಗೆ ಮಾರು ಹೋಗುವ ಮುನ್ನ ಈ ವಿಡಿಯೋ ನೋಡಿ…!

ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…

ರಕ್ತದಲ್ಲಿ ಕಾವೇರಿ ಎಂದು ಬರೆದುಕೊಂಡ ಕರವೇ ಕಾರ್ಯಕರ್ತ..!

ಕಾವೇರಿ ಎಫೆಕ್ಟ್: ರಸ್ತೆಯಲ್ಲಿ ಅಡುಗೆ ಮಾಡಿಕೊಂಡ ಪ್ರತಿಭಟನಾಕಾರರು..!

ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...