ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಆದೇಶ ನೀಡಿರುವ ಸುಪ್ರೀಂ ತೀರ್ಪನ್ನು ಪುನರ್ ಪಲಿಶೀಲಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸುರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ತಮಿಳುನಾಡಿಗೆ 1.50 ಲಕ್ಷ ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ನೀಡಿದ್ದ ಆದೇಶವನ್ನು ಪುನರ್ ಪಲಿಶೀಲನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಇಂದು ನಡೆಯಲಿದೆ. ನ್ಯಾ. ದೀಪಕ್ ಮಿಶ್ರಾ ಹಾಗೂ ನ್ಯಾ. ಯು.ಯು ಲಲಿತ್ ಅವರ ವಿಭಾಗೀಯ ಪೀಠ ಕರ್ನಾಟಕದ ಅರ್ಜಿಯನ್ನು ವಿಚಾರಣೆ ನಡೆಸಲಿದ್ದಾರೆ. ತಮಿಳುನಾಡಿಗೆ ಪ್ರತಿ ದಿನ 15 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಸೆಪ್ಟಂಬರ್ 5ರಂದು ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ಮಾರ್ಪಾಡು ಮಾಡಬೇಕೆಂದು ಕೋರಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿತ್ತು. ಕೋರ್ಟ್ ಆದೇಶದಂತೆ ತಮಿಳುನಾಡಿಗೆ ರಾಜ್ಯದಿಂದ 66 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡಲಾಗಿದೆ. ಇನ್ನು ಮುಂದೆ ನೀರು ಬಿಡುಗಡೆ ಮಾಡಲು ಕೆ.ಆರ್.ಎಸ್ ಸೇರಿದಂತೆ ರಾಜ್ಯದ ಹಲವು ಅಣೆಕಟ್ಟುಗಳಲ್ಲಿ ನೀರಿಲ್ಲ. ಹಾಗಾಗಿ ಆದೇಶಕ್ಕೆ ಮಾರ್ಪಾಡು ತರಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
POPULAR STORIES :
ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..
ಬರ್ತ್ ಡೇ ದಿನ ನನ್ನ ಜೊತೆ ಸ್ವಿಮ್ ಮಾಡಲು ಬರ್ತೀರಾ: ಕ್ರಿಸ್ ಗೇಲ್..!
ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?
ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…