No menu items!
9.5 C
Munich
Wednesday, May 6, 2026

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ನಿಧನ

Must read

ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ (87) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು.
ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದ್ದ ಚಂದ್ರೇಗೌಡ ಅವರು ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು.
ಮೂರು ಬಾರಿ ಶಾಸಕರು, ಮೂರು ಸಲ ಸಂಸದರು, ಒಮ್ಮೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ರಾಜಕೀಯ ಮರು ಹುಟ್ಟು ನೀಡಲು ರಾಜೀನಾಮೆ ನೀಡಿದ್ದರು. ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಇಂದಿರಾ ಗಾಂಧಿ ಸ್ಪರ್ಧೆಗೆ ಚಂದ್ರೇಗೌಡರು ಅವಕಾಶ ಮಾಡಿಕೊಟ್ಟಿದ್ದರು.

- Advertisement -spot_img

More articles

- Advertisement -spot_img

Latest article