ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ವಿಚಾರ: ಹೆಚ್.ಸಿ ಮಹದೇವಪ್ಪ ಸ್ಪಷ್ಟನೆ

Date:

ಧಾರವಾಡ: ಸಚಿವ ಹೆಚ್ಸಿ ಮಹದೇವಪ್ಪ ಅವರು ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಬಳಿಕ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಂಜನಗೂಡು ಉಪಚುನಾವಣೆಯಲ್ಲಿ ನನಗೆ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಅಲುಗಾಡಿಸದಂತಾಗಿತ್ತು. ಅಂದಿನಿಂದ ಸಮಸ್ಯೆ ಇದೆ. ಹೀಗಾಗಿ ಅಂಗರಕ್ಷಕನಿಂದ ಶೂ ಹಾಕಿಸಿಕೊಂಡಿರುವುದಾಗಿ ಸಮರ್ಥನೆ ನೀಡಿದ್ದಾರೆ.
ಈ ಬಗ್ಗೆ ವಿವರಿಸಿದ ಅವರು, ಕುಳಿತರೆ ಬೇಗ ಏಳಲು ಆಗೋದಿಲ್ಲ, ಬಗ್ಗಲು ಕೂಡ ಸಾಧ್ಯವಾಗೋದಿಲ್ಲ. ಎಷ್ಟೋ ಜನ ಕಾಲು ಮುಂದಕ್ಕೆ ಇಟ್ಟು ನಮಸ್ಕಾರ ಮಾಡಿಸಿಕೊಳ್ಳೋರಿದ್ದಾರೆ. ಹಾಗೆ ನಾನು ಮಾಡುವವನಲ್ಲ. ನೀವು ಇದನ್ನು ಗಮನಿಸಿದ್ದು ಸಂತಸ ತಂದಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದಂತಾಗುತ್ತದೆ ಎಂದು ಹೇಳಿದರು.
ಆಪರೇಷನ್ ಕಮಲ ಬಗ್ಗೆ ಡಿಕೆಶಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮಹದೇವಪ್ಪ, ನಮ್ಮ ಅಧ್ಯಕ್ಷರಿಗೆ ಮಾಹಿತಿ ಇರುತ್ತೆ. ಹೀಗಾಗಿ ಅವರು ಹೇಳಿರುತ್ತಾರೆ. ನಾನು ಅಧಿಕಾರಿಗಳ ಸಭೆಯಲ್ಲಿದ್ದೇನೆ. ಹೀಗಾಗಿ ಅದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಮಗಿಂತ ಮಾಧ್ಯಮಗಳಿಗೇ ಹೆಚ್ಚು ಮಾಹಿತಿ ಇದೆ ಎಂದರು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...