ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಕಳೆದೆರಡು ದಿನಗಳಿಂದ ಬೆಂಗಳೂರು ನಗರದಲ್ಲಿ ನಿರ್ಮಾಣವಾಗಿದ್ದ ಆಕ್ರೋಶ ಭರಿತ ವಾತಾವರಣಕ್ಕೆ ಅಮಾಯಕ ಜೀವಗಳು ಸಂಕಷ್ಟದಲ್ಲಿ ಕಳೆಯುವಂತೆ ಮಾಡಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಖಂಡಿಸಿ ಹಾಗೂ ತಮಿಳುನಾಡಿನಲ್ಲಿ ಕನ್ನಡಿಗರ ಮೇಲಾದ ಹಲ್ಲೆಯನ್ನು ಖಂಡಿಸಿ ರಾಜ್ಯದಲ್ಲಿ ಹಲವು ಕನ್ನಡ ಪರ ಸಂಘಟನೆಗಳು ಹಾಗೂ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪ್ರತಿಭಟನೆಯ ಕಾವು ಹಿಂಸಾ ರೂಪಕ್ಕೆ ತಿರುಗಿತ್ತು. ಈ ವೇಳೆ ಹೆಗ್ಗೇನಹಳ್ಳಿಯ ಬಳಿ ನಡೆಸಿದ ಪೊಲೀಸ್ ಗೋಲಿಬಾರ್‍ನಿಂದ ಜನತೆಯಲ್ಲಿ ಸಾಕಷ್ಟು ಭಯ ಸೃಷ್ಠಿಸಿತ್ತು. ಗುಂಡಿನ ದಾಳಿಯಿಂದಾಗಿ ಇಬ್ಬರು ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿ ನಡೆದ ಗೋಲಿಬಾರ್‍ನಲ್ಲಿ ಅಮಾಯಕರು ಬಲಿಯಾದದ್ದು ಮಾತ್ರ ವಿಪರ್ಯಾಸ. ಗೋಲಿಬಾರ್ ವೇಳೆ ಗಂಭೀರವಾಗಿ ಗಾಯಗೊಂಡಿರುವ ಪ್ರದೀಪ್ ಎಂಬಾತ ತನ್ನ ಗೆಳೆಯನನ್ನು ಭೇಟಿಯಾಗಲು ಬಂದಿದ್ದನಂತೆ. ಪ್ರದೀಪ್ ಅವರ ಬಲ ತೊಡೆಗಾಲಿಗೆ ಹೊಕ್ಕ ಗುಂಡು ಹೊರ ತೆಗೆಯಲಾಗಿದ್ದು, ಇನ್ನು 48 ಗಂಟೆಗಳ ಕಾಲ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಕುಣಿಗಲ್ ತಾಲ್ಲೂಕಿನ ಮಡಿಹಳ್ಳಿ ನಿವಾಸಿಯಾದ ಪ್ರದೀಪ್ ಕೆಲಸ ಮುಗಿಸಿ ಮನೆಗೆ ಬಂದು ಮತ್ತೆ ಗೆಳೆಯನನ್ನು ಬೇಟಿಯಾಗುವ ಸಲುವಾಗಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದರಂತೆ. ಗೋಲಿಬಾರ್ ನಡೆಯುತ್ತಿದ್ದ ವಿಷಯವೇ ಅರಿಯದ ಪ್ರದೀಪ್ ಮೇಲೆ ಗುಂಡು ಹಾರಿಸಲಾಗಿದ್ದು ಆತನ ತೊಡೆಯ ಭಾಗದಲ್ಲಿ ಗಂಭೀರ ಪ್ರಮಾಣದ ಗಾಯಗಳಾಗಿದೆ. ಇನ್ನು ಅಮಾಯಕ ಜನರ ಮೇಲೆ ಪೊಲೀಸ್ ಗೋಲಿಬಾರ್ ನಡೆಸಿದ್ದು ಎಷ್ಟರ ಮಟ್ಟಿಗೆ ನ್ಯಾಯವಾದದ್ದು ಎಂದು ಪ್ರದೀಪ್ ಸಹೋದರ ಮಹೇಶ್ ಅವರು ಬೇಸರ ವ್ಯಕ್ತ ಪಡಿಸಿದ್ದಾರೆ. ಇನ್ನು ಗೋಲಿಬಾರ್ ನಡೆದ ವೇಳೆ ಪ್ರದೀಪ್ ಅವರ ಬಲ ತೊಡೆಗೆ ನಾಟಿದ ಗುಂಡು ಎಡ ತೊಡೆಯಲ್ಲಿ ಬಂದು ಸಿಕ್ಕಿಹಾಕಿಕೊಂಡಿದೆ. ವೈದ್ಯರು ಕಳೆದ ರಾತ್ರಿ ಎರಡು ಗಂಟೆಯವರೆಗೂ ಶಸ್ತ್ರ ಚಿಕಿತ್ಸೆ ಮಾಡಿದ್ದು, ಒಂದು ವೇಳೆ ಪ್ರದೀಪ್ ಅವರ ತೊಡೆಗೆ ಸೊಂಕು ತಗುಲಿದ್ದೇ ಆದಲ್ಲಿ ಪ್ರದೀಪ್ ಅವರ ಅಂಗ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಪ್ರಸ್ತುತದಲ್ಲಿ ಅವರನ್ನು ಐಸಿಯುನಲ್ಲಿ ಇಡಲಾಗಿದ್ದು ಇನ್ನು 48 ಗಂಟೆಗಳ ಕಾಲ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇನ್ನು ಗೋಲಿಬಾರ್‍ನಲ್ಲಿ ಗಾಯಗೊಂಡಿದ್ದ ಇನ್ನೋರ್ವ ರಾಜೇಶ್ ಎಂಬಾತನನ್ನು ರಾಜಾಜಿನಗರದಲ್ಲಿರುವ ಇಎಸ್‍ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
POPULAR STORIES :
ಬಿಎಸ್‍ಎನ್‍ಎಲ್ ಜೊತೆ ಜಿಯೋ ಒಪ್ಪಂದ…!
ಪ್ಯಾರಾಲಿಂಪಿಕ್‍ನಲ್ಲಿ ಭಾರತಕ್ಕೆ ಬೆಳ್ಳಿಯ ಬೆಳಕು ನೀಡಿದ ದೀಪಾ..
ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..
ಬರ್ತ್ ಡೇ ದಿನ ನನ್ನ ಜೊತೆ ಸ್ವಿಮ್ ಮಾಡಲು ಬರ್ತೀರಾ: ಕ್ರಿಸ್ ಗೇಲ್..!
ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?
ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…