No menu items!
27.8 C
Munich
Saturday, August 1, 2026

ನನ್ನ ಪಕ್ಷಾಂತರ ಪ್ರಭಾವ ಪಂಚರಾಜ್ಯ ಚುನಾವಣೆ ಮೇಲೂ ಬೀರಿದೆ !

Must read

ಬೆಂಗಳೂರು: ನನ್ನ ಪಕ್ಷಾಂತರ ಪ್ರಭಾವ ಪಂಚರಾಜ್ಯ ಚುನಾವಣೆ ಮೇಲೂ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು. ಈ ಸಂಬಂಧ ಮಾತನಾಡಿದ ಅವರು,ನನ್ನ ಪಕ್ಷಾಂತರದ ಪ್ರಭಾವ ಈಗ ಪಂಚರಾಜ್ಯಗಳ ಚುನಾವಣೆಯ ಮೇಲೂ ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಬಿಜೆಪಿ ಟಿಕೆಟ್ ನೀಡಿದೆ ಎಂದರು
ಕರ್ನಾಟಕದಲ್ಲಿ ಹಿರಿಯರ ನಿರ್ಲಕ್ಷಿಸಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಹೀಗಾಗಿ ಪಂಚರಾಜ್ಯಗಳ ಚುನಾವಣೆಯಲ್ಲಿ ಈಗ ಹಿರಿಯರಿಗೆ ಮಣೆ ಹಾಕಲಾಗಿದೆ. ಎಲ್ಲ ರಾಜ್ಯಗಳಲ್ಲೂ ನಿಯಮ ಒಂದೇ ಅನ್ವಯ ಆಗಬೇಕಲ್ಲವೆ? ಎಂದವರು ಪ್ರಶ್ನಿಸಿದರು. ಈಚೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರನ್ನು ದೆಹಲಿಗೆ ಕರೆಸಿ 3 ದಿನ ಕಾಯಿಸಿದರು. ಐದು ನಿಮಿಷ ಮಾತನಾಡುವಷ್ಟು ಸೌಜನ್ಯ ವರಿಷ್ಠರು ತೋರಲಿಲ್ಲ ವೇಕೆ? ಇನ್ನು, ವಯಸ್ಸಿನ ನೆಪದಲ್ಲಿ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರನ್ನು ಮನೆಗೆ ಕಳುಹಿಸಿದರು. ಆದರೆ, 3-4 ಮಾಜಿ ಮುಖ್ಯಮಂತ್ರಿಗಳೂ ಸೇರಿ, ಈಗ 80 ವರ್ಷ ಆದವರಿಗೂ ಟಿಕೆಟ್ ನೀಡಿದ್ದಾರೆ. ಇದಕ್ಕೆ ಮೂಲ ಕಾರಣ ಜಗದೀಶ್ ಶೆಟ್ಟರ್ ಪ್ರಭಾವ ಎಂದವರು ಪ್ರತಿಪಾದಿಸಿದರು.

- Advertisement -spot_img

More articles

- Advertisement -spot_img

Latest article