ಜೀ5 ಒಟಿಟಿಗೆ ಲಗ್ಗೆ ಇಟ್ಟ ಶಿವಣ್ಣನ ಸಿನಿಮಾ !

Date:

ಕನ್ನಡ ಕಿರುತೆರೆ ಲೋಕದಲ್ಲಿ ಜೀ ಕನ್ನಡ ಈಗಾಗ್ಲೇ ಹಲವು ವಿಭಿನ್ನ ಪ್ರಯತ್ನಗಳನ್ನಾ ಮಾಡುತ್ತಾ ಬಂದಿದೆ. ಕನ್ನಡದ ನಂಬರ್ 1 ಮನರಂಜನಾ ಚಾನೆಲ್ ಎಂಬ ಎಂಬ ಖ್ಯಾತಿಯನ್ನು ತನ್ನದಾಗಿಸಿಕೊಂಡಿದ್ದು, ಜೊತೆಗೆ ಜೀ5 ಒಟಿಟಿ ಮೂಲಕ ಒಳ್ಳೆ ಕಂಟೆಂಟ್ ಸಿನಿಮಾಗಳನ್ನು ಪ್ರಪಂಚದೆದುರು ತೆರೆದಿಡ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಭಿನ್ನ-ವಿಶೇಷ ಯೋಜನೆಗಳನ್ನು ಈ ಒಟಿಟಿ ಹಾಕಿಕೊಂಡಿದೆ. ಸದ್ಯ ಜೀ5 ಒಟಿಟಿಯಲ್ಲಿ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಧಮಾಕ ಎಬ್ಬಿಸ್ತಿದೆ.

ಸಾಹಸ ಥ್ರಿಲ್ಲರ್‌ ಸಿನಿಮಾ ಘೋಸ್ಟ್‌ ಇದೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಶಿವಣ್ಣನ ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿಲ್ಲದೆ ಇರುವವರು ಜೀ5 ಒಟಿಟಿಯಲ್ಲಿ ಕಣ್ತುಂಬಿಕೊಳ್ಳಬಹುದು. ಈಗಾಗಲೇ ನೋಡಿರುವವರು ಇನ್ನೊಮ್ಮೆ ಒಟಿಟಿಯಲ್ಲೂ ನೋಡಬಹುದು.

ಸಿನಿಮಾ ಜೀ5ನಲ್ಲಿ ರಿಲೀಸ್ ಆಗಿರುವುದಕ್ಕೆ ಅದ್ದೂರಿಯಾಗಿ ಪ್ರಚಾರ ಮಾಡಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ ಹತ್ತು ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್ಅನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂಇಎಸ್ ಗ್ರೌಂಡ್ ನಲ್ಲಿ ಘೋಸ್ಟ್ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್‌ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ ಕನ್ನಡ.

ಘೋಸ್ಟ್ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ಮಾಸ್‌ ಅವತಾರದಲ್ಲಿ ಮಿಂಚಿದ್ದಾರೆ. ನಿರ್ದೇಶಕ ಶ್ರೀನಿ ಅಭಿಮಾನಿಗಳಿಗೆ ಶಿವರಾಜ್‌ಕುಮಾರ್‌ ಅವರ ಹೊಸ ಲುಕ್‌ ದರ್ಶನ ಮಾಡಿದ್ದಾರೆ. ಸಂದೇಶನ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ಘೋಸ್ಟ್’ ಸಿನಿಮಾ ನಿರ್ಮಾಣಗೊಂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ರಿಲೀಸ್ ಆಗಿದೆ. ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯಾ ಸಂಗೀತವಿದೆ. ಶಿವಣ್ಣನ ಜೊತೆ ಮಲಯಾಳಂ ನಟ ಜಯರಾಮ್‌, ಹಿಂದಿ ನಟ ಅನುಪಮ್‌ ಖೇರ್‌, ಅರ್ಚನಾ ಜೋಯಿಸ್‌, ಸತ್ಯಪ್ರಕಾಶ್‌, ನಿರ್ದೇಶಕ ಎಂಜಿ ಶ್ರೀನಿವಾಸ್‌ ಹಾಗೂ ಇನ್ನಿತರರು ನಟಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...