ಇನ್ನೆರಡು ದಿನದಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಅನುಮಾನಾಸ್ಪದ ಸಾವು

Date:

ವಿಜಯನಗರ: 2 ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ. ಐಶ್ವರ್ಯ ರೈ ಮೃತಪಟ್ಟ ಯುವತಿ. ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ ಯುವಕನನ್ನು ವಿವಾಹವಾಗಲು ತಯಾರಾಗಿದ್ದಳು. ಆದರೆ ಯುವತಿ ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.


ಯುವತಿ ಕೆಳ ಜಾತಿಯವಳು ಎಂಬ ಕಾರಣಕ್ಕೆ ಕೆಲವು ಷರತ್ತುಗಳ ಮೇಲೆ ಯುವಕನ ಕಡೆಯವರು ಮದುವೆಗೆ ಒಪ್ಪಿದ್ದರು. ಇದೇ ಕಾರಣಕ್ಕೆ ಯುವತಿಯ ಕೊಲೆಗೆ ಪ್ರಚೋದನೆ ನೀಡಲಾಗಿದೆ ಎಂದು ಐಶ್ವರ್ಯ ಪೋಷಕರು ಆರೋಪಿಸಿದ್ದಾರೆ. ಐಶ್ವರ್ಯ ಹಾಗೂ ವರ ಅಶೋಕ್ ಕಳೆದ 7-8 ವರ್ಷಗಳಿಂದ ಪ್ರೀತಿಸುತ್ತಿದ್ದರು. ನಮಗೂ ಅವರಿಗೂ ಹೊಂದಾಣಿಕೆ ಆಗಲ್ಲ, ನಾನು ಈ ಮದುವೆ ಬೇಡ ಎಂದು ಮಗಳಿಗೆ ಹೇಳಿದ್ದೆ. ನನ್ನ ಮಗಳು ಬಹಳ ಗಟ್ಟಿ ಮನಸ್ಸಿನವಳು. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಯುವಕನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...