ನಾಳೆ ರಿಲೀಸ್ ಆಗಲಿದೆ ‘ಡಂಕಿ’ ರೋಮ್ಯಾಂಟಿಕ್ ನಂಬರ್..!

Date:

‘ಡಂಕಿ’ ಸಿನಿಮಾ ಮೂಲಕ ಶಾರುಖ್ ಖಾನ್ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸುವುದಕ್ಕೆ ಸಜ್ಜಾಗಿ ನಿಂತಿದ್ದಾರೆ. ಈಗಾಗಲೇ ರಿಲೀಸ್ ಆಗಿರೋ ‘ಡಂಕಿ’ ಡ್ರಾಪ್ 1 ಝಲಕ್ ಕಿಕ್ ಕೊಟ್ಟಿದೆ. ಮೊದಲ ಹಾಡನ್ನು ಡ್ರಾಪ್ 2 ಎಂದು ಚಿತ್ರತಂಡ ರಿಲೀಸ್ ಮಾಡಲು ಹೊರಟಿದೆ..

‘ಡಂಕಿ’ ಸಿನಿಮಾದ ಮೊದಲ ಹಾಡು ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದೊಂದು ರೊಮ್ಯಾಂಟಿಕ್ ಸಾಂಗ್ ಆಗಿದ್ದು, ಶಾರುಖ್ ಖಾನ್ ಅಭಿಮಾನಿಗಳ ಕಣ್ಣು ಅರಳಿದೆ. ಕಳೆದ ಎರಡು ಸಿನಿಮಾಗಳಲ್ಲಿ ಶಾರುಖ್ ಖಾನ್ ಅನ್ನು ಹೆಚ್ಚಾಗಿ ಆಕ್ಷನ್ ಅವತಾರದಲ್ಲಿಯೇ ನೋಡಿದ್ದರು. ಹೀಗಾಗಿ ರೊಮ್ಯಾಂಟಿಕ್ ಲುಕ್‌ನಲ್ಲಿ ನೋಡುವುದಕ್ಕೆ ಕಾತುರರಾಗಿದ್ದಾರೆ.

‘ಡಂಕಿ’ ಸಿನಿಮಾದ ಈ ರೊಮ್ಯಾಂಟಿಕ್ ಸಾಂಗ್ ನಾಳೆ ರಿಲೀಸ್ ಆಗಲಿದೆ. “ಲುಪ್ ಪುಟ್ ಗಯಾ..” ಅನ್ನೋ ಈ ಮೇಲೋಡಿ ಹಾಡನ್ನು ಕೇಳುವುದಕ್ಕೆ ಸಂಗೀತ ಆಸಕ್ತರು ಕಾದು ಕೂತಿದ್ದಾರೆ. ಬಾಲಿವುಡ್‌ನ ಜನಪ್ರಿಯರ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ ಈ ಸಿನಿಮಾಗೆ ಟ್ಯೂನ್ ಹಾಕಿದ್ದಾರೆ. ಶಾರುಖ್ ಖಾನ್ ಹಾಗೂ ತಾಪ್ಸಿ ಪನ್ನು ರೊಮ್ಯಾಂಟಿಕ್ ಸಾಂಗ್ ಗೆ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.

ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ. ಇನ್ನೇನು ಡಿಸೆಂಬರ್‌ ಕೊನೇ ವಾರದಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...