ಸಹಿ ಯಾಕೆ ಮಾಡಬಾರದು? ಅದು ನಮ್ಮ ಸಮಾಜದ ನಿರ್ಣಯ !

Date:

ಬೆಂಗಳೂರು: ಸಹಿ ಯಾಕೆ ಮಾಡಬಾರದು? ಮಾಡಿದರೆ ತಪ್ಪೇನು? ಅದು ನಮ್ಮ ಸಮಾಜದ ನಿರ್ಣಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾಂತರಾಜು ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸರ್ಕಾರ ಸ್ವೀಕಾರ ಮಾಡದಂತೆ ಸಹಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಡಿಕೆಶಿ ಪ್ರತಿಕ್ರಿಯಿಸಿ ಸಹಿ ಹಾಕಿದ್ದನ್ನು ಒಪ್ಪಿಕೊಂಡರು. ನಮ್ಮ ಸಮಾಜದ ನಿರ್ಣಯ ಬೇರೆ ರಾಜಕೀಯ ಬೇರೆ. ನಾನು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಿದ್ದೇವೆ. ಸಮಾಜದ ಮುಖಂಡರು ವೈಜ್ಞಾನಿಕವಾಗಿ ಆಗಬೇಕು ಎಂದು ಹೇಳಿದ್ದಾರೆ ಎಂದರು.
ಕಾಂತರಾಜು ವರದಿ ತಿರಸ್ಕರಿಸುವಂತೆ ಒಕ್ಕಲಿಗರ ಸಂಘದ ಆಗ್ರಹ ಪತ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಹಿ ಹಾಕಿದ್ದಾರೆ. ಡಿಸಿಎಂ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷದ ಬಹುತೇಕ ಒಕ್ಕಲಿಗ ನಾಯಕರು, ಇತರೇ ಪಕ್ಷಗಳ ಪ್ರಮುಖರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ನವೆಂಬರ್ 24ಕ್ಕೆ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಲು ನಿರ್ಧರಿಸಿರುವ ಈ ಹೊತ್ತಲೇ ನಿರೀಕ್ಷೆಯಂತೆ ಸರ್ಕಾರದ ಒಳಗೆ-ಹೊರಗಿನಿಂದ ಜಾತಿಗಣತಿ ವರದಿ ಕಿಚ್ಚು ಹಬ್ಬತೊಡಗಿದೆ.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....