ಬೆಂಗಳೂರು :ಉಪಮುಖ್ಯಮಂತ್ರಿ ಡಿಕೆಶಿ ಪ್ರಾಮಾಣಿಕರಾಗಿದ್ದರೆ ಸಂಪುಟ ನಿರ್ಧಾರ ವಿರೋಧಿಸಬೇಕಿತ್ತು ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಜವಾಬ್ದಾರಿಯ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿದ್ದರೆ ಸಚಿವ ಸಂಪುಟ ಕೈಗೊಂಡ ತೀರ್ಮಾವನ್ನು ವಿರೋಧಿಸಬೇಕಿತ್ತು. ವಿರೋಧಿಸದೆ ಇರುವುದರಿಂದ ಶಿವಕುಮಾರ್ ತಪ್ಪು ಮಾಡಿದ್ದಾರೆ ಎಂಬುದಾಗಿ ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಪ್ರಕರಣದ ಅನುಮತಿಯನ್ನು ವಾಪಸ್ ತೆಗೆದುಕೊಂಡಿರುವ ಸರ್ಕಾರದ ತೀರ್ಮಾನವು ಸಂಪೂರ್ಣ ಕಾನೂನು ಬಾಹಿರ. ಅವರಿಗೆ ಕಾನೂನಿನ ಭಯ ಇದೆಯಾ ಎಂದು ಖಾರವಾಗಿ ಪ್ರಶ್ನಿಸಿದರು.
DCM ವಿಚಾರದಲ್ಲಿ ಸರ್ಕಾರದ ನಿರ್ಧಾರ ದುರದೃಷ್ಟಕರ ಎಂದ ವಿಜಯೇಂದ್ರ
