ಭ್ರೂಣ ಹತ್ಯೆಕೋರರ ಮೇಲೆ ನಿರ್ದಾಕ್ಷಿಣ್ಯ ಕ್ರಮ

By
1 Min Read

ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಭ್ರೂಣ ಹತ್ಯೆಕೋರರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಭ್ರೂಣ ಪತ್ತೆ ಹಾಗೂ ಭ್ರೂಣ ಹತ್ಯೆಯಂತಹ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವವರ ಬಗ್ಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಭ್ರೂಣ ಹತ್ಯೆಯಂತಹ ಪಾಪದ ಕೆಲಸಗಳನ್ನು ತಡೆಯಲು ಸದ್ಯದಲ್ಲೇ ಒಂದು ಸಭೆ ನಡೆಸಿ ಸೂಕ್ತ ಕ್ರಮದ ನಿರ್ಣಯ ಮಾಡುತ್ತೇವೆ’ ಎಂದರು.

ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವ ಬಗ್ಗೆ ಮಾಹಿತಿ ಕೇಳಿದ್ದೇನೆ. ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅದರ ಬಗ್ಗೆ ಒಂದು ಸಭೆ ಮಾಡಿ ಸೂಕ್ತ ಕ್ರಮದ ನಿರ್ಣಯ ಮಾಡುತ್ತೇವೆ ಎಂದರು. ತೆಲಂಗಾಣ ಚುನಾವಣೆ ಬಗ್ಗೆ ಮಾತನಾಡಿದ ಅವರು, ತೆಲಂಗಾಣದಲ್ಲಿ ನಮ್ಮ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಮಗೆ ಮಾಹಿತಿ ಇರುವ ಪ್ರಕಾರ ಅಲ್ಲಿ ಶೇ .100ಕ್ಕೆ 100ರಷ್ಟು ನಾವು ಗೆಲ್ಲುತ್ತೇವೆ. ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ತೆಲಂಗಾಣ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share This Article