ಬೆಂಗಳೂರು:ಬೆಂಗಳೂರಿನಲ್ಲಿ ಮೂರು ದಿನ ಏಷ್ಯಾದ ಅತಿ ದೊಡ್ಡ ಬೆಂಗಳೂರು ಟೆಕ್ ಸಮ್ಮಿಟ್ 2023 ಆರಂಭಗೊಳ್ಳಲಿದೆ. ನ.29 ರಿಂದ ಡಿ.1ವರೆಗೆ ಬೆಂಗಳೂರು ಅರಮನೆಯಲ್ಲಿ ನಡೆಯಲಿದ್ದು, ಏಷ್ಯಾದ ಅತಿ ದೊಡ್ಡ ಟೆಕ್ ಸಮ್ಮಿಟ್ ಇದಾಗಿರಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಟಿಎಸ್ 2023ಗೆ ಚಾಲನೆ ನೀಡಲಿದ್ದಾರೆ. ಬಿಟಿಎಸ್ನಲ್ಲಿ ಒಟ್ಟು 75 ಸೆಷನ್, 400 ಸ್ಪೀಕರ್, 350 ಸ್ಟಾರ್ಟ್ ಅಪ್, 600 ಪ್ರದರ್ಶಕರು, 20,000 ಉದ್ಯಮಿಗಳು ಭಾಗವಹಿಸಲಿದ್ದಾರೆ. 30ಕ್ಕೂ ಅಧಿಕ ದೇಶಗಳು ಸಮ್ಮಿಟ್ ನಲ್ಲಿ ಭಾಗವಹಿಸಲಿವೆ. ಇದು ಏಷಿಯಾದ ದೊಡ್ಡ ಟೆಕ್ ಸಮ್ಮಿಟ್ ಆಗಿರಲಿದೆ.
ನಾರಾಯಣ ಮೂರ್ತಿಯೂ ಈ ಬಾರಿಯ ಬಿಟಿಎಸ್ನಲ್ಲಿ ಭಾಗವಹಿಸಲಿದ್ದಾರೆ. ಲೆಜೆಂಡ್, ಲೆಗಸಿ ಅಂಡ್ ಲೀಡರ್ ಶಿಪ್ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೆರೋದಾ ಸಂಸ್ಥಾಪಕ ನಿಕಿಲ್ ಕಾಮತ್ ಜೊತೆ ಅವರು ಸಂವಾದ ನಡೆಸಿಕೊಡಲಿದ್ದಾರೆ. ಬ್ರೇಕಿಂಗ್ ಬೌಂಡರೀಸ್, ಇನ್ನೊವೇಷನ್ ಫ್ರಂ ಇಂಡಿಯಾ ಇಂಪಾಕ್ಟ್ ಫಾರ್ ದಿ ವರ್ಲ್ಡ್ ಎಂಬ ಥೀಮ್ನೊಂದಿಗೆ ಈ ಸಮ್ಮಿಟ್ ನಡೆಯಲಿದೆ. ಈ ಬಾರಿಯ ಬಿಟಿಎಸ್ನಲ್ಲಿ 33 ದೇಶಗಳ ಪೈಕಿ 17 ದೇಶಗಳು ತಾವೇ ಸೆಷನ್ ಕೈಗೊಳ್ಳಲಿದ್ದಾರೆ. ಬಿಟಿಎಸ್ನಲ್ಲಿ ಭಾರತ – ಅಮೆರಿಕ ಟೆಕ್ ಕಾನ್ ಕ್ಲೇವ್ ನಡೆಯಲಿದೆ. ಇದರಿಂದ ನವೋದ್ಯನಗಳಿಗೆ ಸಾಕಷ್ಟು ಸಹಾಯವಾಗಲಿದೆ. ಅಮೆರಿಕದವರಿಗೂ ಇಲ್ಲಿ ಬಂಡವಾಳ ಹೂಡಿಕೆ ಮಾಡಲು ಅನುಕೂಲವಾಗಲಿದೆ.
