No menu items!
10.3 C
Munich
Saturday, September 12, 2026

ವಿರೋಧಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ !

Must read

ಹಾವೇರಿ: ನಾನು ವಕೀಲನಾಗಿರುವುದರಿಂದಲೇ ಹಿಂದಿನ ತನಿಖಾ ಆದೇಶ ಕಾನೂನು ಪ್ರಕಾರ ಇಲ್ಲದಿರುವುದಕ್ಕೆ ವಾಪಸ್ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕುಮಾರಸ್ವಾಮಿಯವರು ವಕೀಲರಾಗಿದ್ದ ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರ ತನಿಖೆಯ ಆದೇಶವನ್ನು ವಾಪಸ್ ಪಡೆದಿರುವುದು ಸರಿಯೇ ಎಂಬ ಪ್ರಶ್ನೆಗೆ ಹಾವೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ವಕೀಲನಾಗಿರುವುದರಿಂದ, ಹಿಂದಿನ ತನಿಖಾ ಆದೇಶ ಕಾನೂನು ಪ್ರಕಾರ ಇಲ್ಲದ್ದಕ್ಕೆ
ವಾಪಸ್ ಪಡೆಯಲಾಗಿದೆ. ನನಗೆ ಕಾನೂನಿನ ಅರಿವು ಇಲ್ಲದಿದ್ದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಯಂತೆ ನಾನು ಕಾನೂನುಬಾಹಿರವಾಗಿದ್ದರೂ ತನಿಖೆಯ ಬಗ್ಗೆ ಸಮ್ಮತಿ ನೀಡುತ್ತಿದ್ದೆ ಎಂದರು.
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದರು.

- Advertisement -spot_img

More articles

- Advertisement -spot_img

Latest article