No menu items!
30.8 C
Munich
Sunday, June 21, 2026

ಸಿಎಂ ಸಿದ್ದರಾಮಯ್ಯ ರಿಂದ ನಾಳೆ ಬೀದರ್ ಪ್ರವಾಸ

Must read

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬೀದರ್ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಧಿಕಾರಿ ಕೆ.ಚಿರಂಜೀವಿ ಮಾಹಿತಿ ನೀಡಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.15ಕ್ಕೆ ಬೀದರ್ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಬಂದಿಳಿಯಲಿದ್ಗಾರೆ.
ಮಧ್ಯಾಹ್ನ 12.20ಕ್ಕೆ ಬೀದರ್’ನಿಂದ ಹೆಲಿಕ್ಯಾಪ್ಟರ್ ಮೂಲಕ ಭಾಲ್ಕಿಗೆ ತೆರಳುವರು ನಂತರ ಭಾಲ್ಕಿ ಪಟ್ಟಣದ ಬಿಕೆಐಟಿ ಕಾಲೇಜಿನಲ್ಲಿ ನಡೆಯಲಿರುವ ಮಾಜಿ ಸಚಿವ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಲೋಕನಾಯಕ ಅಭಿನಂದನ ಗ್ರಂಥ ಬಿಡುಗಡೆಗೊಳಿಸುವರು. ಸಂಜೆ 4ಕ್ಕೆ ಭಾಲ್ಕಿಯಿಂದ ಬೀದರ್ಗೆ ಬಂದು, ಅಲ್ಲಿಂದ ವಿಶೇಷ ವಿಮಾನದ ಮ‌ೂಲಕ ಬೆಂಗಳೂರಿಗೆ ವಾಪಸ್ ಪ್ರಯಾಣ ಬೆಳಸಲಿದ್ದಾರೆ.

- Advertisement -spot_img

More articles

- Advertisement -spot_img

Latest article