No menu items!
12.1 C
Munich
Thursday, May 7, 2026

ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ T-20 ಪಂದ್ಯ: ಮೆಟ್ರೋ ಸಂಚಾರ ವಿಸ್ತರಣೆ

Must read

ಬೆಂಗಳೂರು: ಭಾರತ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟಿ -20 ಪಂದ್ಯಾವಳಿಯ 5 ನೇ ಪಂದ್ಯವು ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೀಗಾಗಿ ಮೆಟ್ರೋ ಸಂಚಾರ ಸೌಲಭ್ಯವನ್ನು ವಿಸ್ತರಣೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಎಂಆರ್‌ಸಿಎಲ್, ” ಟಿ-20 ಕ್ರಿಕೆಟ್ ಪಂದ್ಯದ ಪ್ರಯುಕ್ತ 3ನೇ ಡಿಸೆಂಬರ್ 2023 ರಂದು ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ನಿತ್ಯ 11 ಗಂಟೆಗೆ ಕೊನೆಯ ರೈಲು ಹೊರಡುತ್ತಿತ್ತು. ಸದ್ಯ ನೇರಳ ಮತ್ತು ಹಸಿರು ಮಾರ್ಗಗಳಲ್ಲಿರುವ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಹೊರಡುವ ರೈಲು ಸೇವೆಗಳನ್ನು ರಾತ್ರಿ 11.45 ರವರೆಗೆ ವಿಸ್ತರಿಸಲಾಗಿದೆ ” ಎಂದು ತಿಳಿಸಿದೆ.

ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಭಾನುವಾರ ಮಧ್ಯಾಹ್ನ 2.00 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರುತ್ತದೆ. ಸದರಿ ಪೇಪರ್ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ, ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತ್ರತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತಗೊಳಿಸಿ ವಿತರಣೆ ಮಾಡಲಾಗುವುದು ಎಂದು ಮೆಟ್ರೋ ನಿಗಮ ತಿಳಿಸಿದೆ.

- Advertisement -spot_img

More articles

- Advertisement -spot_img

Latest article