ರಾಜ ಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಐಡಿಯಲ್ಸ್ ಹೋಮ್ ಬಡಾವಣೆಯಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಸೇರಿದಂತೆ ಶಾಮನೂರು ಶಿವಶಂಕರಪ್ಪ ಆಸ್ಪತ್ರೆ ಹಾಗೂ ಸುತ್ತ ಮುತ್ತಲ ಕಟ್ಟಡಗಳನ್ನು ತೆರವುಗೊಳಿಸಲಾಗುವುದಿಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಈ ಒತ್ತುವರಿ ಕಟ್ಟಡಗಳಿಗೆ ಸಂಬಂದಿಸಿದ ಎಲ್ಲಾ ಮಾಹಿತಿಗಳನ್ನು ಮುಂದಿನ ದಿನಗಳಲ್ಲಿ ನಗರ ಜಿಲ್ಲಾಧಿಕಾರಿಗಳಿಗೆ ಕಳಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಭೂ ದಾಖಲೆ ಇಲಾಖೆಯ ಜಂಟಿ ನಿರ್ದೆಶಕ ಕೆ. ಜಯ ಪ್ರಕಾಶ್ ಅವರು ಇತ್ತೀಚಿನ ಸರ್ವೇ ವರಧಿಯನ್ನು ಬಿಬಿಎಂಪಿ ಅಧಿಕಾರಿಗಳಿಗೆ ಸಲ್ಲಿಸಿದ್ದು, ಅದರಲ್ಲಿ ದರ್ಶನ್ ಮನೆ, ಎಸ್‍ಎಸ್ ಆಸ್ಪತ್ರೆ ಸೇರಿದಂತೆ ಇಲ್ಲಿನ ವಿವಿಧ ಕಟ್ಟಡಗಳು ಸುಮಾರು 7 ಎಕರೆ ಜಾಗವನ್ನು ರಾಜಕಾಲುವೆ ಒತ್ತುವರಿ ಮಾಡಿಕೊಂಡಿವೆ ಎಂದು ವರದಿ ನೀಡಿತ್ತು..
ಐಡಿಯಲ್ಸ್ ಹೋಮ್ಸ್ ಬಡಾವಣೆಗೆ 1969ರಲ್ಲಿ ಬೆಂಗಳೂರು ನಗರ ಸುಧಾರಣಾ ಟ್ರಸ್ಟ್ ಮಂಡಳಿಯಿಂದ ಇದಕ್ಕೆ ಅನುಮೋದನೆ ಸಿಕ್ಕಿತ್ತು. 1989ರಲ್ಲಿ ಬಡಾವಣೆಯ ಪರಿಷ್ಕøತ ಯೋಜನೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ದೊರತಿತ್ತು ಎಂದು ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ವಿವರಿಸಿದ್ದರು.
ಇನ್ನು ಇಲ್ಲಿ ಬಡಾವಣೆ ನಿರ್ಮಾಣವನ್ನು ರದ್ದುಗೊಳಿಸಬೇಕೆಂದು ರಾಜರಾಜೇಶ್ವರಿ ಪ್ರತಿಷ್ಠಪನಾ ಸಮಿತಿ 2003ರಲ್ಲಿ ಹೈಕೋರ್ಟ್ ಮೊರೆ ಹೋಗಿತ್ತು. ಪ್ರಕರಣದ ಕುರಿತಂತೆ ತನಿಖೆ ನಡೆಸಬೇಕು ಎಂದು ಬಿಡಿಎ ಹಾಗೂ ನಗರ ಜಿಲ್ಲಾಡಳಿತಕ್ಕೆ ಕೋಟ್ ಸೂಚನೆ ನೀಡಿತ್ತು.
ತನಿಖೆ ವೇಳೆ ಈ ಭಾಗಗಳಲ್ಲಿ 7 ಎಕರೆ 6 ಕುಂಟೆ ಜಾಗ ಒತ್ತುವರಿಯಾಗಿದೆ ಎಂದು ಧೃಡವಾಗಿದೆ. ಈ ಸಂಬಂಧ ಬಿಡಿಎ ಹೈಕೋರ್ಟ್‍ಗೆ ವರದಿಯನ್ನೂ ಸಹ ಸಲ್ಲಿಸಿತ್ತು ಎನ್ನಲಾಗಿದೆ.
POPULAR STORIES :
ತಿಂಗಳಲ್ಲಿ ಎರಡನೇ ಬಾರಿ ಪೆಟ್ರೊಲ್ ದರ ಏರಿಕೆ…!
ತಾಮ್ರದ ಪಾತ್ರೆಯಲ್ಲಿ ಕೂಡಿಟ್ಟ ನೀರನ್ನು ಸೇವಿಸುವುದು ಉತ್ತಮ ಯಾಕೆ..?
ಪತಂಜಲಿಯ ಸಿ.ಇ.ಒ ಆಚಾರ್ಯ ಬಾಲಕೃಷ್ಣ , ಈಗ ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರು..!
ಸಿರಿಯಾ ದೇಶದ ಮಹಿಳೆಯರನ್ನು ಲೈಂಗಿಕ ಗುಲಾಮಗಿರಿಯಿಂದ ರಕ್ಷಿಸಲು ಪಣ ತೊಟ್ಟು ನಿಂತ ದಿಟ್ಟ ಮಹಿಳೆ.
ಬಿಎಸ್‍ಎನ್‍ಎಲ್ ಜೊತೆ ಜಿಯೋ ಒಪ್ಪಂದ…!
ಬಂದ್ ಎಫೆಕ್ಟ್: ರಾಜ್ಯಕ್ಕೆ ಇಪ್ಪತ್ತೈದು ಸಾವಿರ ಕೋಟಿ ಲಾಸ್..!
ಪ್ಯಾರಾಲಿಂಪಿಕ್‍ನಲ್ಲಿ ಭಾರತಕ್ಕೆ ಬೆಳ್ಳಿಯ ಬೆಳಕು ನೀಡಿದ ದೀಪಾ..
ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..