No menu items!
20.9 C
Munich
Friday, August 21, 2026

ಹೊಸ ವರ್ಷಕ್ಕೆ ಈ ಬಾರಿ ಯಾವುದೇ ನಿರ್ಬಂಧ ಇಲ್ಲ !

Must read

ಬೆಂಗಳೂರು:- ಈ ಬಾರಿ ಹೊಸ ವರ್ಷಕ್ಕೆ ಯಾವುದೇ ಕಂಡೀಷನ್ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಬಾರಿ ಹೊಸ ವರ್ಷಕ್ಕೆ ಯಾವದೇ ಕಂಡೀಷನ್ ಇಲ್ಲ. ಕಳೆದ ಬಾರಿಯೂ ಯಾವದೇ ಕಂಡೀಷನ್ ಇರಲಿಲ್ಲ. ಈ ಬಾರಿಯೂ ಯಾವದೇ ನಿರ್ಬಂಧ ಇರೋದಿಲ್ಲ. 2022 ರಲ್ಲಿ ಕೋವಿಡ್ ಕಾರಣದಿಂದ ನಿರ್ಬಂಧ ಹಾಕಲಾಗಿತ್ತು.
ಈ ಬಾರಿಯೂ ಎಲ್ಲಾ ನಿರ್ಬಂಧಗಳು ಸಡಿಲಿಕೆ ಮಾಡುತ್ತೇವೆ. ಸುರಕ್ಷತೆಗೆ ಬಗ್ಗೆ ಪೊಲೀಸ್ ಅಧಿಕಾರಿಗಳು ಗಮನ ಹರಿಸುತ್ತಾರೆ. ಹೊಸ ವರ್ಷ ಸಂಭ್ರಮಾಚರಣೆ ನಿರ್ಬಂಧಗಳನ್ನ ಪೊಲೀಸ್ ಕಮಿಷನರ್ ತಿಳಿಸುತ್ತಾರೆ. ಹೊಸ ವರ್ಷಕ್ಕೆ ಬಿಬಿಎಂಪಿ ಯಿಂದ ಕಂಡೀಷನ್ ಇಲ್ಲ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಹೇಳಿಕೆ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article