No menu items!
24 C
Munich
Monday, May 4, 2026

ಸಿ.ಕೆ.ನಾನು ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ!

Must read

ಬೆಂಗಳೂರು: ಸಿ.ಕೆ.ನಾನು ಜೆಡಿಎಸ್‌ನ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಕಾಡುಗೊಂಡನಹಳ್ಳಿಯ ಖಾಸಗಿ ಸಭಾ ಭವನದಲ್ಲಿ ನಡೆದ ಜೆಡಿಎಸ್‌ ರಾಷ್ಟ್ರೀಯ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಇಬ್ರಾಹಿಂ, ‘ಜಾತ್ಯತೀತ ಸಿದ್ಧಾಂತದ ಮೇಲೆ ನಿಂತಿರುವ ಜೆಡಿಎಸ್‌, ಮಹಾತ್ಮಾ ಗಾಂಧೀಜಿ ಅವರ ತತ್ವಗಳನ್ನು ಪಾಲಿಸುವ ಪಕ್ಷವಾಗಿದೆ. ಆದರೆ ಗಾಂಧೀಜಿ ಅವರನ್ನು ವಿರೋಧಿಸುವವರೊಂದಿಗೆ ಜೆಡಿಎಸ್‌ ಸಖ್ಯ ಬೆಳೆಸುವುದು ಸರಿಯೇ’ ಎಂದು ಉಚ್ಚಾಟಿತ ಜೆಡಿಎಸ್ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಪ್ರಶ್ನಿಸಿದ್ದಾರೆ.
ನಾನು ಕಳೆದ ಅನೇಕ ವರ್ಷಗಳಿಂದ ಜನತಾದಳದಲ್ಲಿ ಇದ್ದೇನೆ. ಹಿಂದಿನ ಸಭೆಗಳಲ್ಲಿ ಪಕ್ಷದ ವರಿಷ್ಠ ದೇವೇಗೌಡ ಅವರೊಂದಿಗೆ ನಾನು ಭಾಗಿಯಾಗಿದ್ದೇನೆ. ನನ್ನನ್ನು ಜನತಾದಳದಿಂದ ಉಚ್ಚಾಟಿಸಿದ ದೇವೇಗೌಡರೇ ಜೆಡಿಎಸ್ ಸದ್ಯ ಸಖ್ಯ ಬೆಳೆಸಿರುವ ಕ್ರಮ ಸರಿಯೇ ಎಂಬುದಕ್ಕೆ ಉತ್ತರಿಸಬೇಕು ಎಂದಿದ್ದಾರೆ.

- Advertisement -spot_img

More articles

- Advertisement -spot_img

Latest article