ಜೈಪುರ: ಛತ್ತೀಸ್ಗಢ, ಮಧ್ಯಪ್ರದೇಶದ ರೀತಿಯಲ್ಲಿ ರಾಜಸ್ಥಾನದಲ್ಲೂ ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದ್ದು, ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ. ಇವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಾಗಿದ್ದು, ಈ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೊಂದು ಅಚ್ಚರಿಯ ಆಯ್ಕೆ ಮಾಡಿದೆ. ಮುಂದಿನ ಲೋಕಸಭೆ ಚುನಾವಣೆಗಾಗಿ ಹೊಸ ಮುಖಗಳನ್ನು ಬಿಜೆಪಿ ಹೈಕಮಾಂಡ್ ಮಾಡಿದಂತಿದೆ. ಈ ಮೂಲಕ ಛತ್ತೀಸ್ಗಢ, ಮಧ್ಯಪ್ರದೇಶ ಇದೀಗ ರಾಜಸ್ಥಾನದಲ್ಲಿಯೂ ಹೊಸ ಮುಖಕ್ಕೆ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ
ರಾಜಸ್ಥಾನದ ನೂತನ ಸಿಎಂ ಆಗಿ ಶಾಸಕ ಭಜನ್ ಲಾಲ್ ಶರ್ಮಾ ಆಯ್ಕೆ
Date: