ಅಪಾಯಕಾರಿ ಮರಗಳ ತೆರವು: ಹೈಕೋರ್ಟ್ ಗೆ ಬಿಬಿಎಂಪಿ ಮಾಹಿತಿ

Date:

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಪ್ರಮಾಣಿತ ಕಾರ್ಯಾಚರಣೆ ವಿಧಾನದಡಿಯಲ್ಲಿ ಮಾರ್ಗಸೂಚಿಗಳನ್ನು ರೂಪಿಸಲಾಗಿದ್ದು, ಅಧಿಕಾರಿಗಳು ಅವುಗಳನ್ನು ಪಾಲನೆ ಮಾಡುತ್ತಿದ್ದಾರೆ’ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ.
ನಮ್ಮ ಮನೆಯ ಬಳಿ ಇರುವ ಮರ ಯಾವುದೇ ಸಮಯದಲ್ಲಾದರೂ ಬೀಳುವಂತಹ ಸ್ಥಿತಿಯಲ್ಲಿದೆ. ಆದರೂ, ಅಧಿಕಾರಿಗಳು ಅದನ್ನು ತೆರವುಗೊಳಿಸುತ್ತಿಲ್ಲ’ ಎಂದು ಆಕ್ಷೇಪಿಸಿ ನಗರದ ಡಾ.ವಿ.ಎಲ್. ನಂದೀಶ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ‘ಎಲ್ಲಾ ವೃಕ್ಷ ಅಧಿಕಾರಿಗಳು ಮತ್ತು ಡಿಸಿಎಫ್‌ಗಳು ಈ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತಿದ್ದಾರೆ. ಸ್ಥಳ ಪರಿಶೀಲನೆ ನಡೆಸಿ, ಮರವನ್ನು ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆಗೆ ತಗುಲಿದ್ದ ವೆಚ್ಚವನ್ನು ಮರ ಇದ್ದ ನಿವೇಶನದ ಮಾಲೀಕರಿಂದ ವಸೂಲು ಮಾಡಲಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ‘ಈ ವ್ಯಾಜ್ಯದ ಮೂಲ ಕಾರಣ ಅಪಾಯಕಾರಿ ಮರ. ಈಗಾಗಲೇ ಪಾಲಿಕೆ ನ್ಯಾಯಾಲಯದ ಸೂಚನೆಯಂತೆ ಆ ಮರವನ್ನು ತೆರವುಗೊಳಿಸಿದೆ. ಆದ್ದರಿಂದ, ಅರ್ಜಿ ವಿಚಾರಣೆ ಮುಂದುವರಿಸುವ ಅಗತ್ಯವಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ವಿಲೇವಾರಿ ಮಾಡಿತು.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...