ನವದೆಹಲಿ: ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಜಿಗಿದು ಸ್ಮೋಕ್ ಬಾಂಬ್ ದಾಳಿ ನಡೆಸಿದ ಪ್ರಕರಣದ ಕುರಿತು ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕನಿಷ್ಠ ಎಂಟು ಲೋಕಸಭಾ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ರಾಂಪಾಲ್, ಅರವಿಂದ್, ವೀರ್ ದಾಸ್, ಗಣೇಶ್, ಅನಿಲ್, ಪ್ರದೀಪ್, ವಿಮಿತ್ ಮತ್ತು ನರೇಂದ್ರ ಸೇರಿದಂತೆ ಒಟ್ಟು ಎಂಟು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಸಂಸತ್ ಭವನದಲ್ಲಿ ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಪಾಸ್ ಪಡೆದು ಬಂದಿದ್ದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಸಂದರ್ಶಕರ ಗ್ಯಾಲರಿಯಿಂದ ಹಾರಿಬಂದು ಸ್ಮೋಕ್ ಬಾಂಬ್ ಸಿಡಿಸಿದ್ದಾರೆ. ಇನ್ನಿಬ್ಬರು ಸಂಸತ್ತಿನ ಹೊರಗೆ ಸ್ಮೋಕ್ ಬಾಂಬ್ ಸಿಡಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಐವರನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿ ಸದ್ಯ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಶೋಧ ಮುಂದುವರಿದಿದೆ.
ಸಂಸತ್‌ನಲ್ಲಿ ಭದ್ರತಾ ಲೋಪ: 8 ಲೋಕಸಭೆ ಸಿಬ್ಬಂದಿ ಅಮಾನತು
Date: