ಬೆಂಗಳೂರು:ಬೆಂಗಳೂರು ಸೇರಿ ರಾಜ್ಯದಲ್ಲಿ 2.55 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇರುವುದು ತಿಳಿದುಬಂದಿದೆ. ಖಾಲಿ ಇರುವ ಹುದ್ದೆಗಳ ಪೈಕಿ 75,000 ಕ್ಕೂ ಹೆಚ್ಚು ಶಿಕ್ಷಣ ಇಲಾಖೆಯಲ್ಲಿ (ಉನ್ನತ ಮತ್ತು ಶಾಲಾ ಶಿಕ್ಷಣ), 35,196 ಆರೋಗ್ಯ ಇಲಾಖೆಯಲ್ಲಿ ಮತ್ತು 22,069 ಗೃಹ ಇಲಾಖೆಯಲ್ಲಿ ಇವೆ. ಇದರಲ್ಲಿ ಶಿಕ್ಷಕರು, ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸ್ ಕಾನ್ಸ್ಟೇಬಲ್ಗಳ ಹುದ್ದೆಗಳು ಸೇರಿವೆ. ಇದಲ್ಲದೇ ಕಂದಾಯ, ಆರ್ಡಿಪಿಆರ್, ಪಶುಸಂಗೋಪನೆ,
ಹಣಕಾಸು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ತಲಾ ಸುಮಾರು 10 ಸಾವಿರ ಹುದ್ದೆಗಳು ಖಾಲಿ ಇವೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ತಿಳಿಸಿದೆ. ಮುಂದಿನ ಕೆಲವು ವರ್ಷಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ತಿಳಿಸಿರುವುದಾಗಿ ಉನ್ನತ ಮೂಲಗಳು ಹೇಳಿವೆ.
2.55 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸವಾಲಿನ ಸಂಗತಿಯಾಗಿದೆ. ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದು ಸವಾಲಿನದ್ದಾಗಿದೆ. ಏಕೆಂದರೆ ಇದು ದೊಡ್ಡ ಆರ್ಥಿಕ ಪರಿಣಾಮಗಳನ್ನು ಹೊಂದಿರುತ್ತದೆ. ಸದ್ಯ ಮಂಜೂರಾದ ಹುದ್ದೆಗಳು 7.2 ಲಕ್ಷ. ಈಗ 2.55 ಲಕ್ಷ ಹುದ್ದೆಗಳು ಖಾಲಿ ಇದ್ದರೂ, ಮಂದಿ ನಿವೃತ್ತಿಯಾದಾಗ ಅದರ ಸಂಖ್ಯೆ ಹೆಚ್ಚಾಗಲಿದೆ ಎಂದು ಮೂಲಗಳು ತಿಳಿಸಿವೆ