ಯೋಜಿತ ರೂಪದಲ್ಲಿ ವೈಟ್ ಟಾಪಿಂಗ್ ಕೆಲಸ ಮಾಡಬೇಕಿದೆ

Date:

ಬೆಳಗಾವಿ: ಬೆಂಗಳೂರಿನ ರಸ್ತೆ ಹಾಗೂ ಚರಂಡಿಗಳನ್ನು ಅಭಿವೃದ್ಧಿಪಡಿಸಲು ವೈಟ್ ಟಾಪಿಂಗ್ ಗೆ ಆದ್ಯತೆ ನೀಡಲಾಗುತ್ತಿದ್ದು, ಈ ಬಗ್ಗೆ ಸದ್ಯದಲ್ಲೇ ಬೆಂಗಳೂರಿನ ಶಾಸಕರ ಸಭೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಎಚ್ ಎಸ್ ಗೋಪಿನಾಥ್ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. ಬೆಂಗಳೂರಿನಲ್ಲಿ 1.14 ಕೋಟಿ ವಾಹನಗಳು ಇವೆ. ಬೆಂಗಳೂರಿನ ಜನಸಂಖ್ಯೆಯಷ್ಟೇ ವಾಹನಗಳ ಸಂಖ್ಯೆ ಕೂಡ ಇದೆ. ನಗರದಲ್ಲಿ ನಿತ್ಯ ಸರಾಸರಿ 1300 ದ್ವಿಚಕ್ರ ವಾಹನಗಳು ಹಾಗೂ 490 ಕಾರುಗಳು ನೊಂದಣಿಯಾಗುತ್ತಿವೆ.

ವಾಹನಗಳ ಒತ್ತಡದಿಂದ ರಸ್ತೆಗಳು ಹಾಳಾಗುತ್ತಿದ್ದು, ರಸ್ತೆಗುಂಡಿ ಮುಚ್ಚುವುದೇ ದೊಡ್ಡ ಕೆಲಸವಾಗಿದೆ. ಹೀಗಾಗಿ ರಸ್ತೆಗುಂಡಿ ಮುಚ್ಚುವ ಕೆಲಸವನ್ನು ವಿಕೇಂದ್ರೀಕರಣ ಮಾಡಲಾಗಿದೆ. ಸಾರ್ವಜನಿಕರು ಅಥವಾ ಪೊಲೀಸ್ ಸಿಬ್ಬಂದಿ ಫೋಟೋ ತೆಗೆದು ಕಳುಹಿಸುವ ಗುಂಡಿಗಳನ್ನು ಪಾಲಿಕೆ ಅಧಿಕಾರಿಗಳು ಮುಚ್ಚಿಸುತ್ತಿದ್ದಾರೆ ಎಂದರು. ವೈಟ್ ಟಾಪಿಂಗ್ ಗೆ 1000 ಕೋಟಿ ಅನುದಾನವಿದ್ದು, ಮುಖ್ಯರಸ್ತೆಗಳಲ್ಲದೆ ಬೇರೆ ರಸ್ತೆಗಳನ್ನು ಮಾಡಬೇಕೆಂಬ ಬೇಡಿಕೆ ಇದೆ. ಬೆಂಗಳೂರಿನಲ್ಲಿ ಕೇಬಲ್ ಗಳ ಹಾವಳಿ ಹೆಚ್ಚಾಗಿದೆ. ಇದಕ್ಕಾಗಿ ರಸ್ತೆ ಅಗೆಯಲಾಗುತ್ತಿದೆ. ಹೀಗಾಗಿ ಯೋಜಿತ ರೂಪದಲ್ಲಿ ವೈಟ್ ಟಾಪಿಂಗ್ ಕೆಲಸ ಮಾಡಬೇಕಿದೆ ಎಂದರು.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...