ಬೆಂಗಳೂರು: ರಾಮನಗರದ ಅರಳಿಕರೆದೊಡ್ಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಯಿಂದ ಮೃತಪಟ್ಟಿರುವ ತಿಮ್ಮಪ್ಪ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ, ಅವರ ಮಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ತಮ್ಮ ಗೃಹ ಕಚೇರಿಯಿಂದ ಭಾನುವಾರ ದೂರವಾಣಿ ಮೂಲಕ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ ಅವರು, “ಗ್ರಾಮಸ್ಥರ ಬೇಡಿಕೆಯಂತೆ ಅಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಿ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಿ” ಎಂದು ತಿಳಿಸಿದರು.