No menu items!
20.3 C
Munich
Friday, August 21, 2026

ಮಂಡ್ಯ: ಮದ್ದೂರಿನಲ್ಲಿ ಒಬ್ಬ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ದೃಢ!

Must read

ಮಂಡ್ಯ: ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ನ ಜೆಎನ್1 ರೂಪಾಂತರಿ ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಇಂಥ ಸಂದರ್ಭದಲ್ಲೇ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ.

ಪ್ರಯಾಣದ ಇತಿಹಾಸ ಇಲ್ಲದಿದ್ದರೂ ವ್ಯಕ್ತಿಗೆ ಸೋಂಕು ತಗುಲಿದೆ. ಶಸ್ತ್ರಚಿಕಿತ್ಸೆಗಂದು ಆಸ್ಪತ್ರೆಗೆ ತೆರಳಿದ್ದಾಗ ಪರೀಕ್ಷೆ ನಡೆಸಿದ ವೇಳೆ ಕೊವಿಡ್ ಧೃಡಪಟ್ಟಿದೆ. ಸೋಂಕಿತ ವ್ಯಕ್ತಿಯಲ್ಲಿ ಯಾವ ರೋಗ ಲಕ್ಷಣಗಳು ಇರಲಿಲ್ಲ. ಇದೀಗ ವ್ಯಕ್ತಿಯ ಸಂಪರ್ಕದಲ್ಲಿದ್ದ ನಾಲ್ವರಿಗೂ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ. ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆದಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

- Advertisement -spot_img

More articles

- Advertisement -spot_img

Latest article