ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ಎಚ್ಚರಿಕೆಯಿಂದ ಇರಬೇಕು !

Date:

ಬೆಂಗಳೂರು: ಒಮಿಕ್ರಾನ್‌ ಉಪತಳಿ JN.1 ತಳಿಯಿಂದ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಆದರೆ‌ ಎಚ್ಚರಿಕೆ ಇರಬೇಕು, ಕ್ರಮ ಅನುಸರಿಸಬೇಕು. ಮಾಸ್ಕ್ ಕಡ್ಡಾಯ ಮಾಡಲ್ಲ. ಕಡ್ಡಾಯ ಮಾಡುವ ಪರಿಸ್ಥಿತಿ ಉಂಟಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯಕೀಯ, ಹೋಂ, ಡಿಸಿಎಂ, ಸಿಎಸ್, ಹಣಕಾಸು, ತಜ್ಞರ ಸಮಿತಿ ಜೊತೆಗಿನ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕೊರೊನಾ ಸಂಖ್ಯೆ ಹೆಚ್ಚಾಗುತ್ತಿದೆ. ಮೂವರು ಕೊರೊನಾದಿಂದ ಮೃತರಾಗಿದ್ದಾರೆ.
ಆದರೆ ಅವರು ಕೋವಿಡ್ ನಿಂದಲೇ ಸತ್ತಿದ್ದಾರೆ ಅನ್ನೋಕೆ ಆಗಲ್ಲ. ಅವರಿಗೆ ಬೇರೆ ಬೇರೆ ಸಮಸ್ಯೆ ಇತ್ತು. ಅವರಿಗೆ ಕೋವಿಡ್ ಪಾಸಿಟಿವ್ ಇತ್ತು. ಆರೋಗ್ಯ ಸಚಿವರು ಈಗಾಗಲೇ ಸಭೆ ಮಾಡಿದ್ದಾರೆ ಎಂದರು.ಇಂದು ತಜ್ಞರ ಸಲಹೆಗಳನ್ನು ಪಡೆದಿದ್ದೇವೆ. ಈ ಹಿಂದೆ ಮಾಡಿದ ತಪ್ಪು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನೆ. ಆಕ್ಸಿಜನ್, ಬೆಡ್, ಔಷಧಿ ಯಾವುದೂ ಕೊರತೆ ಆಗಬಾರದು. ಬೇರೆ ಕಾಯಿಲೆ‌ ಇರೋರಿಗೂ ಚಿಕಿತ್ಸೆ ಕೊಡಲು ಸೂಚನೆ ನೀಡಲಾಗಿದೆ. ಯಾವುದೇ ಕೊರತೆ ಆಗದಂತೆ ಸೂಚನೆ ನೀಡಿದ್ದೇನೆ. ಲಸಿಕೆ ಅಭಿಯಾನ ಕೂಡಾ ಅಗತ್ಯವಿದ್ದರೆ ಶುರು ಮಾಡಲು ತಿಳಿಸಿದ್ದೇನೆ. ಯಾರು ತೆಗೆದುಕೊಂಡಿಲ್ಲ ಅವರು ಲಸಿಕೆ ಪಡೆಯಬೇಕು ಎಂದರು.
ಶನಿವಾರದಿಂದ ಪ್ರತಿದಿನ 5 ಸಾವಿರ ಟೆಸ್ಟ್ ಪ್ರಾರಂಭ ಮಾಡ್ತೀವಿ. ಕ್ಯಾಬಿನೆಟ್ ಸಬ್ ಕಮಿಟಿ ರಚನೆ ಮಾಡ್ತೀವಿ. ಯಾರು ಹೆಡ್ ಅಂತ ಕ್ಯಾಬಿನೆಟ್ ನಲ್ಲಿ ನಿರ್ಧಾರ ಮಾಡ್ತೀವಿ. ಕ್ಯಾಬಿನೆಟ್ ಸಬ್ ಕಮಿಟಿ ನಿರಂತರವಾಗಿ ಕೆಲಸ ಮಾಡಬೇಕು. ತಜ್ಞರ ಜೊತೆ ಸಂಯೋಜನೆಯಾಗಿ ಕೆಲಸ ಮಾಡಬೇಕು. TAC ಯಾವುದೇ ಶಿಫಾರಸು ಮಾಡಿದರು ಅದನ್ನ ಜಾರಿ ಮಾಡಬೇಕು. ಗಡಿ ಜಿಲ್ಲೆಯಲ್ಲಿ ಹೆಚ್ಚು ಟೆಸ್ಟ್ ಮಾಡಬೇಕು. ಜನಸಂದಣಿ ಇರುವಲ್ಲಿ ಮಾಸ್ಕ್ ಹಾಕಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಹಾಕಬೇಕು ಎಂದರು.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...